ಬೆಂಗಳೂರಿನಲ್ಲಿ ದೀಪಾವಳಿ ಸಮಯದಲ್ಲಿ ಪಟಾಕಿಗಳಿಗೆ ಸಂಬಂಧಿಸಿದ ಕಣ್ಣಿನ ಗಾಯಗಳ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಸುಮಾರು 250 ಕ್ಕೂ ಹೆಚ್ಚು ಜನರ ಕಣ್ಣಿಗೆ ಹಾನಿ ಉಂಟಾಗಿದ್ದು, ಮಿಂಟೋ, ನಾರಾಯಣ ನೇತ್ರಾಲಯ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರು ಶಾಶ್ವತವಾಗಿ ದೃಷ್ಟಿಯನ್ನು ಕಳೆದುಕೊಂಡಿದ್ದಾರೆ. ಒಟ್ಟು ಪ್ರಕರಣಗಳಲ್ಲಿ ಶೇಕಡ 60ಕ್ಕಿಂತ ಹೆಚ್ಚುಮಕ್ಕಳು ಒಳಗೊಂಡಿರುವುದರ ಬಗ್ಗೆ ನಾರಾಯಣ ನೇತ್ರಾಲಯ ಕಳವಳ ವ್ಯಕ್ತಪಡಿಸಿದೆ. ಅಕ್ಟೋಬರ್ 19 ರಿಂದ 90 ರೋಗಿಗಳು ಚಿಕಿತ್ಸೆ ಪಡೆದಿದ್ದು, ಇವರಲ್ಲಿ 46 ಮಕ್ಕಳು ಸೇರಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ 37, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 35 ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

