ಈ ಭೂಮಿ ಹುಟ್ಟಿದಾಗಿನಿಂದ ಮಾನವ ಹಾಗೂ ಪ್ರಾಣಿ ಸಂಘರ್ಷ ಇದ್ದದ್ದೇ.. ಆದರೆ ಕಾಡು ಮಾಯವಾಗಿ ನಾಡು ಬೆಳದಂತೆಲ್ಲಾ ವನ್ಯ ಜೀವಿಗಳ ದಾಳಿ ಜಾಸ್ತಿಯಾಗಿದೆ. ವನ್ಯ ಪ್ರಾಣಿಗಳ ದಾಳಿಯಿಂದ ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ. ಈ ವರ್ಷದ ಮೊದಲಾರ್ಧದಲ್ಲಿ 28 ಜನ ಮೃತ ಪಟ್ಟಿದ್ದಾರೆ.
ಸೆ.04ರಂದು ಮತ್ತೊಂದು ದುರ್ಘಟನೆ ಸಂಭವಿಸಿದೆ. ಹುಲಿ #Tigher ದಾಳಿಯಿಂದ ಚರಣ್ ನಾಯ್ಕ್ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆ ವೆಂಕಟೇಶ್ ಆನೆ #Elephant ತುಳಿತಕ್ಕೆ ಬಲಿಯಾಗಿದ್ದಾರೆ. ಮಾನವ ಪ್ರಾಣಿ ಸಂಘರ್ಷದ ಬಗ್ಗೆ ಚರ್ಚೆ ಮಾಡಿದ್ದೇವೆ. ಜೀವಹಾನಿ ಆಗದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ಆಗಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲಲಿ ಮಾತನಾಡಿದ ಅವರು, ಜನವಸತಿ ಪ್ರದೇಶಕ್ಕೆ ಆನೆ ಬರದಂತೆ ತಡೆಯಲು 640 ಕಿಮೀ ರೈಲ್ವೆ ಬ್ಯಾರಿಕೇಡ್ ಹಾಕಬೇಕಿದೆ. ಹೆಚ್ಚುವರಿ 300 ಕಿಮೀ ರೈಲ್ವೆ ಬ್ಯಾರಿಕೇಡ್ ಹಾಕಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಿದ್ದೇನೆ. 1000 ಕಿಮೀ ಸೋಲಾರ್ ತಂತಿ ಅಳವಡಿಸಲಾಗಿದೆ. 7 ಎಲಿಫೆಂಟಾ ಟಾಸ್ಕ್ ಫೋರ್ಸ್ ಗಳನ್ನು ರಚನೆ ಮಾಡಿದ್ದೇವೆ. ಇದರಲ್ಲಿ 38 ಜನ ನುರಿತವರು ಇರುತ್ತಾರೆ ಎಂದರು ತಿಳಿಸಿದರು.
ಇನ್ನು ವನ್ಯ ಪ್ರಾಣಿಗಳಿಂದ ಹೊರ ಗುತ್ತಿಗೆಯ ಇಬ್ಬರು ನೌಕರರು ಮೃತ ಪಟ್ಟಿದ್ದಾರೆ. ಮುಂದೆ ಸಮಸ್ಯೆ ಆಗದ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ. ಅರಣ್ಯ ಸಮೀಪ ಇರುವ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ. ವನ್ಯ ಜೀವಿಗಳ ದಾಳಿಯಿಂದ ಮೃತಪಟ್ಟವರಿಗೆ ಪರಿಹಾರ ನೀಡಿದ್ದೇವೆ. ಗಣಿಗಾರಿಕೆಯಿಂದಲೂ ವನ್ಯ ಜೀವಿಗಳು ಕಾಡಿಗೆ ಬರುತ್ತಿವೆ. ಕಾಡಿನಂಚಿನಲ್ಲಿ ಗಣಿಗಾರಿಕೆಗೆ ಅವಕಾಶ ಇಲ್ಲ ಎಂದು ಎಚ್ಚರಿಕೆ ನೀಡಿದರು.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…