ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

April 8, 2025
2:30 PM
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ, ದಕ್ಷಿಣ ಕನ್ನಡ 93.57% ರಷ್ಟು ಉತ್ತೀರ್ಣರಾಗಿದ್ದು, ಯಾದಗಿರಿ 48.45% ರಷ್ಟು ಕೊನೆಯ ಸ್ಥಾನದಲ್ಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಒಟ್ಟಾರೆ ಶೇಕಡಾವಾರು 73.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪರೀಕ್ಷೆಗೆ ಹಾಜರಾದ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತ್ಯುತ್ತಮ ಸ್ಥಾನ ಗಳಿಸಿದ್ದಾರೆ ಎಂದು  ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ  ತಿಳಿಸಿದ್ದಾರೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ, ದಕ್ಷಿಣ ಕನ್ನಡ 93.57% ರಷ್ಟು ಉತ್ತೀರ್ಣರಾಗಿದ್ದು, ಯಾದಗಿರಿ 48.45% ರಷ್ಟು ಕೊನೆಯ ಸ್ಥಾನದಲ್ಲಿದೆ.

ಕಲೆ, ವಿಜ್ಞಾನ ಮತ್ತು ವಾಣಿಜ್ಯ ಮೂರೂ ವಿಭಾಗಗಳಲ್ಲಿಯೂ ಹುಡುಗಿಯರು  ಹೆಚ್ಚಿನ ಸಾಧನೆ ಮಾಡಿದ್ದಾರೆ.  ಬಳ್ಳಾರಿಯ ಎಲ್.ಆರ್. ಸಂಜನಾ ಬಾಯಿ 597 ಅಂಕಗಳೊಂದಿಗೆ ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ, ದಕ್ಷಿಣ ಕನ್ನಡದ ದೀಪಶ್ರೀ ಎಸ್ 599 ಅಂಕಗಳೊಂದಿಗೆ ವಾಣಿಜ್ಯ ವಿಭಾಗದಲ್ಲಿ ಮತ್ತು ದಕ್ಷಿಣ ಕನ್ನಡದವರೇ ಆದ ಅಮೂಲ್ಯ ಕಾಮತ್ ವಿಜ್ಞಾನ ವಿಭಾಗದಲ್ಲಿ 599 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ
ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ
October 13, 2026
9:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror