ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಒಟ್ಟಾರೆ ಶೇಕಡಾವಾರು 73.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪರೀಕ್ಷೆಗೆ ಹಾಜರಾದ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತ್ಯುತ್ತಮ ಸ್ಥಾನ ಗಳಿಸಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ, ದಕ್ಷಿಣ ಕನ್ನಡ 93.57% ರಷ್ಟು ಉತ್ತೀರ್ಣರಾಗಿದ್ದು, ಯಾದಗಿರಿ 48.45% ರಷ್ಟು ಕೊನೆಯ ಸ್ಥಾನದಲ್ಲಿದೆ.
ಕಲೆ, ವಿಜ್ಞಾನ ಮತ್ತು ವಾಣಿಜ್ಯ ಮೂರೂ ವಿಭಾಗಗಳಲ್ಲಿಯೂ ಹುಡುಗಿಯರು ಹೆಚ್ಚಿನ ಸಾಧನೆ ಮಾಡಿದ್ದಾರೆ. ಬಳ್ಳಾರಿಯ ಎಲ್.ಆರ್. ಸಂಜನಾ ಬಾಯಿ 597 ಅಂಕಗಳೊಂದಿಗೆ ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ, ದಕ್ಷಿಣ ಕನ್ನಡದ ದೀಪಶ್ರೀ ಎಸ್ 599 ಅಂಕಗಳೊಂದಿಗೆ ವಾಣಿಜ್ಯ ವಿಭಾಗದಲ್ಲಿ ಮತ್ತು ದಕ್ಷಿಣ ಕನ್ನಡದವರೇ ಆದ ಅಮೂಲ್ಯ ಕಾಮತ್ ವಿಜ್ಞಾನ ವಿಭಾಗದಲ್ಲಿ 599 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…
23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…