ಗೋಧಿ ಇ-ಹರಾಜು | 3.85 ಲಕ್ಷ ಮೆಟ್ರಿಕ್ ಟನ್ ಮಾರಾಟ | ಹೊಸ ದಾಖಲೆ ಸೃಷ್ಟಿ |

February 16, 2023
1:08 PM

ಕೃಷಿ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಹೊಸ ಹೊಸ ತಂತ್ರಜ್ಞಾನ, ರೈತರ ಅನುಕೂಲಕ್ಕೆ ತಕ್ಕಂತ ಯೋಜನೆಗಳು, ಸಾಲ ಸೌಲಭ್ಯಗಳನ್ನು ಒದಗಿಸುತ್ತಿದೆ. ಇದೀಗ ಕೇಂದ್ರ ಸರ್ಕಾರವು ಗೋಧಿ ಹರಾಜಿನಲ್ಲಿ ಹೊಸ ದಾಖಲೆಯನ್ನೇ ಸೃಷ್ಟಿ ಮಾಡಿದೆ. ಕಳೆದ ವಾರ ಇ- ಹರಾಜಿನಲ್ಲಿ ಗೋಧಿ ಹರಾಜಿಗೆ ಮುಂದಾಗಿತ್ತು. ಈ ಪ್ರಕ್ರಿಯೆಯು ಎರಡನೇ ವಾರವೂ ಮುಂದುವರಿದಿದ್ದು, ಎರಡನೇ ಇ-ಹರಾಜಿನಲ್ಲಿ 3.85 ಲಕ್ಷ ಮೆಟ್ರಿಕ್ ಟನ್ ಗೋಧಿಯನ್ನು ಭಾರತೀಯ ಆಹಾರ ನಿಗಮವು 901 ಕೋಟಿ ರೂ.ಗೆ ಮಾರಾಟ ಮಾಡಿದೆ.

Advertisement

ದೇಶದಲ್ಲಿ ಹೆಚ್ಚುತ್ತಿರುವ ಗೋಧಿ ಮತ್ತು ಗೋಧಿ ಹಿಟ್ಟಿನ ಬೆಲೆಯನ್ನು ನಿಯಂತ್ರಿಸಲು ಮಂತ್ರಿ ಮಂಡಳಿಯ ಶಿಫಾರಸಿನ ಆಧಾರದ ಮೇಲೆ ಇ-ಹರಾಜು ಮೂಲಕ ಗೋಧಿಯನ್ನು ಮಾರಾಟ ಮಾಡಲಾಗುತ್ತಿದೆ.

ಫೆಬ್ರವರಿ 15, 2023ರಂದು ನಡೆದ ಎರಡನೇ ಇ-ಹರಾಜಿನಲ್ಲಿ  ಭಾರತೀಯ ಆಹಾರ ನಿಗಮವು 3.85 ಲಕ್ಷ ಮೆಟ್ರಿಕ್ ಟನ್ ಗೋಧಿಯನ್ನು ರೂ.901 ಕೋಟಿಗೆ ಮಾರಾಟ ಮಾಡಿದೆ. ಈ ಪ್ರಮಾಣದ ಗೋಧಿ ಮಾರಾಟವು ಇಲ್ಲಿಯವರೆಗೆ ಇ ಹರಾಜಿನಲ್ಲಿ ಮಾರಾಟವಾದ ಗೋಧಿ ಪ್ರಮಾಣ ದಾಖಲೆಯಾಗಿದೆ. ಎರಡನೇ ಇ-ಹರಾಜಿನಲ್ಲಿ  ಭಾರತೀಯ ಆಹಾರ ನಿಗಮವು 3.85 ಲಕ್ಷ ಮೆಟ್ರಿಕ್ ಟನ್ ಗೋಧಿಯನ್ನು ರೂ.901 ಕೋಟಿಗೆ ಮಾರಾಟ ಮಾಡಿದ್ದು, ಇದರಲ್ಲಿ 1060ಕ್ಕೂ ಹೆಚ್ಚು ಬಿಡ್‌ದಾರರು ಭಾಗವಹಿಸಿದ್ದರು.

ಈ ಹರಾಜಿನಲ್ಲಿ 15.25 ಲಕ್ಷ ಮೆಟ್ರಿಕ್‌ ಟನ್ ಗೋಧಿಯನ್ನು ಮಾರಾಟ ಮಾಡುವುದಾಗಿ ಘೋಷಿಸಲಾಗಿತ್ತು. 50-100 MT, 100-499 MT ಮತ್ತು 500-1000 MT ವ್ಯಾಪ್ತಿಯಲ್ಲಿ ಬಿಡ್‌ದಾರರು ಗೋಧಿಗಾಗಿ ಬಿಡ್‌ ಮಾಡಿದ ಕಾರಣ ಸಣ್ಣ ಮತ್ತು ಮಧ್ಯಮ ಗಿರಣಿ ಮಾಲೀಕರು ಮತ್ತು ವ್ಯಾಪಾರಿಗಳು ಹರಾಜಿನಲ್ಲಿ ಭಾಗವಹಿಸಿದ್ದಾರೆ ಎಂದು ಇ ಹರಾಜು ವರದಿ ತಿಳಿಸಿದೆ.

ಕೇವಲ 5 ಬಿಡ್‌ದಾರರು ಗರಿಷ್ಠ 3000 MTಗೆ ಏಕಕಾಲದಲ್ಲಿ ಬಿಡ್ ಮಾಡಿದ್ದಾರೆ.  ಪ್ರತಿ ಕ್ವಿಂಟಾಲ್‌ಗೆ ಸರಾಸರಿ 2338.01 ರೂ. ದರದಲ್ಲಿ ಬಿಡ್‌ಗಳು ಇದ್ದುದರಿಂದ, ಭಾರತೀಯ ಆಹಾರ ನಿಗಮವು ಮೊದಲ ಮಾರಾಟದಿಂದ 901 ಕೋಟಿ ರೂಪಾಯಿಯನ್ನು ಗಳಿಸಿದೆ.

ದೇಶದಲ್ಲಿ ಹೆಚ್ಚುತ್ತಿರುವ ಗೋಧಿ ಮತ್ತು ಗೋಧಿ ಹಿಟ್ಟಿನ ಬೆಲೆಯನ್ನು ನಿಯಂತ್ರಿಸಲು ಮಂತ್ರಿ ಮಂಡಳಿಯ ಶಿಫಾರಸಿನ ಆಧಾರದ ಮೇಲೆ ಇ-ಹರಾಜು ಮೂಲಕ ಗೋಧಿಯನ್ನು ಮಾರಾಟ ಮಾಡಲಾಗುತ್ತಿದೆ. ಅಂತಹ ಹರಾಜು ಮಾರಾಟವು ದೇಶದಾದ್ಯಂತ ಮಾರ್ಚ್ 2023 ರ 2 ನೇ ವಾರದವರೆಗೆ ಪ್ರತಿ ಬುಧವಾರ ನಡೆಯಲಿದೆ.

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 06-04-2025 | ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ |
April 6, 2025
6:08 PM
by: ಸಾಯಿಶೇಖರ್ ಕರಿಕಳ
ಒಂದೆಡೆ ಮಳೆ-ಇನ್ನೊಂದೆಡೆ ಹೀಟ್‌ವೇವ್‌ | ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
April 6, 2025
11:00 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನ ಭೂಕಂಪ | ಭಾರತೀಯ ಸೇನಾ ಆಸ್ಪತ್ರೆಯಲ್ಲಿ 700 ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ
April 6, 2025
10:00 AM
by: ದ ರೂರಲ್ ಮಿರರ್.ಕಾಂ
ಮಾನವ-ಆನೆ ಸಂಘರ್ಷ ತಡೆಗೆ ಕ್ರಮ | 200 ಕೋ. ರೂ. ವೆಚ್ಚದ ರೈಲ್ವೆ ಬ್ಯಾರಿಕೇಡ್ ಕಾಮಗಾರಿ
April 6, 2025
9:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group