ದೇಶಾದ್ಯಂತ ಮತ್ತೆ ಹವಾಮಾನ ವೈಪರೀತ್ಯ ಆಗುವ ಸಾಧ್ಯತೆ ಇದ್ದು, ಬಂಗಾಳ ಕೊಲ್ಲಿಯಲ್ಲಿ ಒಟ್ಟು 3 ಚಂಡಮಾರುತಗಳು ಪರಿಚಲನೆ ಉಂಟು ಮಾಡುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿದ್ದು, ಅದರ ಬೆನ್ನಲ್ಲೇ ಮತ್ತೊಂದು ಸುಳಿ ಸೃಷ್ಟಿಯಾಗಿದೆ. ಇದು ಪಶ್ಚಿಮ ಮಧ್ಯ ಮತ್ತು ವಾಯುವ್ಯ ಬಂಗಾಳ ಕೊಲ್ಲಿಯ ಮೇಲೆ ನೆಲೆಗೊಂಡಿದೆ. ಸಮುದ್ರ ಮಟ್ಟದಿಂದ 5.8 ಕಿಮೀ ಮತ್ತು 7.6 ಕಿಮೀ ನಡುವೆ ಹರಡಿದೆ ಎಂದು ಐಎಂಡಿ ತಿಳಿಸಿದೆ.
ಮಧ್ಯಪ್ರದೇಶದಲ್ಲಿ ಚಂಡಮಾರುತದ ಎಫೆಕ್ಟ್ ಈಗಾಗಲೇ ಉಂಟಾಗಿದ್ದು, ಇದರ ಪರಿಣಾಮ ಜೋರಾಗಿ ಇರುವುದಿಲ್ಲ. ಮತ್ತೊಂದು ಕಡಿಮೆ ಒತ್ತಡದ ಚಂಡಮಾರುತವು ದಕ್ಷಿಣ ಒಡಿಶಾ ಮತ್ತು ಪಕ್ಕದ ಪ್ರದೇಶಗಳಲ್ಲಿ ವಿಸ್ತರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಏತನ್ಮಧ್ಯೆ, ಕೋಲ್ಕತ್ತಾ ಸೇರಿದಂತೆ ದಕ್ಷಿಣ ಬಂಗಾಳದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ
ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ ಮಲೆನಾಡು ಭಾಗದಲ್ಲಿಯೂ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಹುತೇಕ ಕಡೆ ನದಿಗಳು ಉಕ್ಕಿನ ಹರಿಯುತ್ತಿದ್ದು, ಅಪಾಯದ ಮಟ್ಟ ಮೀರಿ ಉಕ್ಕುತ್ತಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.