ಮುಂಗಾರು ಮಳೆದೇಶಾದ್ಯಂತ ತನ್ನ ಅಬ್ಬರವನ್ನು ಮತ್ತಷ್ಟು ಹೆಚ್ಚಿಸಿದೆ. ಗುಜರಾತ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಭೀಕರ ಪ್ರವಾಹಕ್ಕೆ ಸಾವು ನೋವು ಉಂಟಾಗಿದೆ. ನೂರಾರು ಮಂದಿ ಮನೆ ಮಠ ಕಳೆದುಕೊಂಡಿದ್ದಾರೆ. ಈ ಮಧ್ಯೆ ಮತ್ತೆ ಹವಾಮಾನ ವೈಪರೀತ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.
ದೇಶಾದ್ಯಂತ ಮತ್ತೆ ಹವಾಮಾನ ವೈಪರೀತ್ಯ ಆಗುವ ಸಾಧ್ಯತೆ ಇದ್ದು, ಬಂಗಾಳ ಕೊಲ್ಲಿಯಲ್ಲಿ ಒಟ್ಟು 3 ಚಂಡಮಾರುತಗಳು ಪರಿಚಲನೆ ಉಂಟು ಮಾಡುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿದ್ದು, ಅದರ ಬೆನ್ನಲ್ಲೇ ಮತ್ತೊಂದು ಸುಳಿ ಸೃಷ್ಟಿಯಾಗಿದೆ. ಇದು ಪಶ್ಚಿಮ ಮಧ್ಯ ಮತ್ತು ವಾಯುವ್ಯ ಬಂಗಾಳ ಕೊಲ್ಲಿಯ ಮೇಲೆ ನೆಲೆಗೊಂಡಿದೆ. ಸಮುದ್ರ ಮಟ್ಟದಿಂದ 5.8 ಕಿಮೀ ಮತ್ತು 7.6 ಕಿಮೀ ನಡುವೆ ಹರಡಿದೆ ಎಂದು ಐಎಂಡಿ ತಿಳಿಸಿದೆ.
ಮಧ್ಯಪ್ರದೇಶದಲ್ಲಿ ಚಂಡಮಾರುತದ ಎಫೆಕ್ಟ್ ಈಗಾಗಲೇ ಉಂಟಾಗಿದ್ದು, ಇದರ ಪರಿಣಾಮ ಜೋರಾಗಿ ಇರುವುದಿಲ್ಲ. ಮತ್ತೊಂದು ಕಡಿಮೆ ಒತ್ತಡದ ಚಂಡಮಾರುತವು ದಕ್ಷಿಣ ಒಡಿಶಾ ಮತ್ತು ಪಕ್ಕದ ಪ್ರದೇಶಗಳಲ್ಲಿ ವಿಸ್ತರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಏತನ್ಮಧ್ಯೆ, ಕೋಲ್ಕತ್ತಾ ಸೇರಿದಂತೆ ದಕ್ಷಿಣ ಬಂಗಾಳದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ
ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ ಮಲೆನಾಡು ಭಾಗದಲ್ಲಿಯೂ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಹುತೇಕ ಕಡೆ ನದಿಗಳು ಉಕ್ಕಿನ ಹರಿಯುತ್ತಿದ್ದು, ಅಪಾಯದ ಮಟ್ಟ ಮೀರಿ ಉಕ್ಕುತ್ತಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…