ಬೆಳಗಾವಿಯಲ್ಲಿ 3 ದಿನಗಳ ಮಾವು, ಜೇನು ಮೇಳ | ರೈತರಿಂದ ಪ್ರದರ್ಶನ, ಗ್ರಾಹಕರಿಗೆ ನೇರ ಮಾರಾಟ

April 26, 2025
9:54 PM

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆಯಿಂದ ಬೆಳಗಾವಿಯ ಹೋಮ್ ಪಾರ್ಕ್ ನಲ್ಲಿ ಆಯೋಜಿಸಿರುವ ಮೂರು ದಿನಗಳ ಮಾವು ಹಾಗೂ ಜೇನು ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ   ಚಾಲನೆ ದೊರೆಯಿತು.

ಮೇಳದಲ್ಲಿ ರೈತರ ಮಾವು, ಜೇನು ಪ್ರದರ್ಶನಕ್ಕಾಗಿ ಸುಮಾರು 24 ಮಳಿಗೆಗಳನ್ನು ತೆರೆಯಲಾಗಿದ್ದು, ಬೆಳಗಾವಿ, ಕಿತ್ತೂರು, ಖಾನಾಪುರ, ರತ್ನಗಿರಿ, ಪಂಡಪುರ, ದೇವಗಿರಿ, ದಕ್ಷಿಣ ಕನ್ನಡ, ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ ರೈತರ ಮಾವು ಮತ್ತು ಜೇನಿನ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.

ರೈತ ರಾಜೇಶ್ ಸಾವಳೇಕರ ಮಾತನಾಡಿ, ಕಳೆದ 25 ವರ್ಷಗಳಿಂದ ಕೃಷಿಯಲ್ಲಿ ತೊಡಗಿದ್ದು, ವೈವಿದ್ಯಮಯ ಮಾವು ಬೆಳೆಯುತ್ತಿದ್ದೇನೆ. ಪ್ರದರ್ಶನದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಜೇನು ಕೃಷಿಕ  ಮಧುಕೇಶ್ವರ ಹೆಗಡೆ, ಜೇನು ಹಾಗೂ ಜೇನಿನ ಉತ್ಪನ್ನಗಳ ಉದ್ಯಮ ಸ್ಥಾಪಿಸಿದ್ದು, ಸಾಕಷ್ಟು ಮಂದಿ ಕೆಲಸ ಮಾಡುತ್ತಿದ್ದಾರೆ. ಜೇನು ಸಾಕಾಣಿಕೆ ಬಗ್ಗೆ , ಉಚಿತ ತರಬೇತಿ ನೀಡಲಾಗುತ್ತಿದ್ದು, ಉತ್ತಮ ಪ್ರಶಂಸೆ ವ್ಯಕ್ತವಾಗಿದೆ ಎಂದು ಹೇಳಿದರು.

ಮಾಂತೇಶ್ ಮುರಗೋಡ, ಪ್ರದರ್ಶನದಲ್ಲಿ ರೈತರು ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಶಾಸಕ ರಾಜು ಸೇಠ್, ಜಿಲ್ಲಾ ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುರಗೋಡ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ವೇಳೆ  ಮಳಿಗೆಗಳಿಗೆ ಭೇಟಿ ನೀಡಿ, ಮಾವು , ಜೇನಿನ ಬಗ್ಗೆ ಮಾಹಿತಿ ಪಡೆದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror