ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆಯಿಂದ ಬೆಳಗಾವಿಯ ಹೋಮ್ ಪಾರ್ಕ್ ನಲ್ಲಿ ಆಯೋಜಿಸಿರುವ ಮೂರು ದಿನಗಳ ಮಾವು ಹಾಗೂ ಜೇನು ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ದೊರೆಯಿತು.
ಮೇಳದಲ್ಲಿ ರೈತರ ಮಾವು, ಜೇನು ಪ್ರದರ್ಶನಕ್ಕಾಗಿ ಸುಮಾರು 24 ಮಳಿಗೆಗಳನ್ನು ತೆರೆಯಲಾಗಿದ್ದು, ಬೆಳಗಾವಿ, ಕಿತ್ತೂರು, ಖಾನಾಪುರ, ರತ್ನಗಿರಿ, ಪಂಡಪುರ, ದೇವಗಿರಿ, ದಕ್ಷಿಣ ಕನ್ನಡ, ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ ರೈತರ ಮಾವು ಮತ್ತು ಜೇನಿನ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.
ರೈತ ರಾಜೇಶ್ ಸಾವಳೇಕರ ಮಾತನಾಡಿ, ಕಳೆದ 25 ವರ್ಷಗಳಿಂದ ಕೃಷಿಯಲ್ಲಿ ತೊಡಗಿದ್ದು, ವೈವಿದ್ಯಮಯ ಮಾವು ಬೆಳೆಯುತ್ತಿದ್ದೇನೆ. ಪ್ರದರ್ಶನದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಜೇನು ಕೃಷಿಕ ಮಧುಕೇಶ್ವರ ಹೆಗಡೆ, ಜೇನು ಹಾಗೂ ಜೇನಿನ ಉತ್ಪನ್ನಗಳ ಉದ್ಯಮ ಸ್ಥಾಪಿಸಿದ್ದು, ಸಾಕಷ್ಟು ಮಂದಿ ಕೆಲಸ ಮಾಡುತ್ತಿದ್ದಾರೆ. ಜೇನು ಸಾಕಾಣಿಕೆ ಬಗ್ಗೆ , ಉಚಿತ ತರಬೇತಿ ನೀಡಲಾಗುತ್ತಿದ್ದು, ಉತ್ತಮ ಪ್ರಶಂಸೆ ವ್ಯಕ್ತವಾಗಿದೆ ಎಂದು ಹೇಳಿದರು.
ಮಾಂತೇಶ್ ಮುರಗೋಡ, ಪ್ರದರ್ಶನದಲ್ಲಿ ರೈತರು ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಶಾಸಕ ರಾಜು ಸೇಠ್, ಜಿಲ್ಲಾ ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುರಗೋಡ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ವೇಳೆ ಮಳಿಗೆಗಳಿಗೆ ಭೇಟಿ ನೀಡಿ, ಮಾವು , ಜೇನಿನ ಬಗ್ಗೆ ಮಾಹಿತಿ ಪಡೆದರು.
ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…
ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು…
ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್‌ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…