ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ ವಿಚಾರವಾಗಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದು, ನ್ಯಾಯಾಲಯ ಅವರ ಅರ್ಜಿಯನ್ನು ವಜಾಗೊಳಿಸಿ ಮುಂದಿನ ನಾಲ್ಕು ತಿಂಗಳಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಮಾಡುವಂತೆ ಈಗ ಕೋರ್ಟ್ ತೀರ್ಪು ನೀಡಿದೆ. ನಾವು ಪ್ರತಿ ಕ್ಷೇತ್ರದಲ್ಲೂ ಒಂದೊಂದು ಪ್ಯಾಕೇಜ್ ಮಾಡಲು ಮುಂದಾಗಿದ್ದು, ದೊಡ್ಡ ಕ್ಷೇತ್ರಗಳಲ್ಲಿ ಎರಡು ಪ್ಯಾಕೇಜ್ ಸೇರಿದಂತೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿ ಮಾಡಲಾಗುವುದು. ಈ ಕುರಿತ ಟೆಂಡರ್ ಶೀಘ್ರವೇ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಇದಕ್ಕಾಗಿ 7 ವರ್ಷಗಳ ಅವಧಿಗೆ ₹ 4,790 ಕೋಟಿ ವೆಚ್ಚದಲ್ಲಿ ಕಸ ವಿಲೇವಾರಿ ಯೋಜನೆ ಮಾಡಲಾಗುತ್ತಿದೆ. ಈಗಿರುವ ವ್ಯವಸ್ಥೆಗೂ, ಹೊಸ ವ್ಯವಸ್ಥೆಗೂ ಬೇಕಾದಷ್ಟು ವ್ಯತ್ಯಾಸಗಳಿವೆ. ಕಸ ವಿಂಗಡಣೆ, ವಾಹನಗಳ ಜವಾಬ್ದಾರಿ, ಕಟ್ಟಡ ತ್ಯಾಜ್ಯ ಪ್ರತ್ಯೇಕತೆ ಸೇರಿದಂತೆ ಅನೇಕ ಜವಾಬ್ದಾರಿ ನೀಡಲಾಗುವುದು” ಎಂದು ವಿವರಿಸಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…