ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಮತ್ತು ಬೆಂಗಳೂರಿನಲ್ಲಿ ಪ್ರಕರಣಗಳಲ್ಲಿ ಸ್ವಲ್ಪ ಏರಿಕೆ ಕಂಡುಬಂದರೂ, ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಈ ವರ್ಷ ಇಲ್ಲಿಯವರೆಗೆ, ನಾವು 35 ಪ್ರಕರಣಗಳು ವರದಿಯಾಗಿದ್ದು, ಕಳೆದ 15 ದಿನಗಳಲ್ಲಿ ಸ್ವಲ್ಪ ಏರಿಕೆಯಾಗಿದೆ ಎಂದು ಹೇಳಿದ್ದಾರೆ. ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವವರು, ಗರ್ಭಿಣಿಯರು ಮತ್ತು ಮಕ್ಕಳು ಜನದಟ್ಟಣೆಯ ಸ್ಥಳಗಳಿಗೆ ಭೇಟಿ ನೀಡುವಾಗ ಜಾಗರೂಕರಾಗಿರಬೇಕು. ಜನದಟ್ಟಣೆಯ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಿದ್ದಾರೆ. ತೀವ್ರ ಉಸಿರಾಟದ ಸೋಂಕು ಪ್ರಕರಣಗಳಿಗೆ ಮಾತ್ರ ಕೋವಿಡ್-19 ಪರೀಕ್ಷೆಗಳು ಕಡ್ಡಾಯ ಎಂದು ಸಚಿವರು ತಿಳಿಸಿದ್ದಾರೆ.
ದರ್ಶಿತ್ ಕೆ ಎಸ್, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್, ಬೆಳ್ಳಾರೆದರ್ಶಿತ್…
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…
ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳ ಮತ್ತು ಅಭಿವೃದ್ದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕನಿಷ್ಠ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಯಾತ್ರಾ ಸ್ಥಳ ಘಾಟಿ ಕ್ಷೇತ್ರದ…
ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಮಳೆ ಹಾಗು ದಟ್ಟ ಮಂಜು ಆವರಿಸಿದ…
ಓರ್ವ ಕಲಾವಿದ ಸಮಾಜಮುಖಿಯಾಗಿ, ಕಲಾತ್ಮಕವಾಗಿ ಹೇಗೆ ಬದುಕಬೇಕೆನ್ನುವುದನ್ನು ಹಾಸ್ಯಗಾರ್ ದಿ.ಪೆರುವಡಿ ನಾರಾಯಣ ಭಟ್ಟರು…