ಅಯೋಧ್ಯೆಗೆ ಪಾದಯಾತ್ರೆ ಮಾಡಿದ 350 ಮುಸ್ಲಿಂ ಭಕ್ತರು | 6 ದಿನಗಳ ಪಾದಯಾತ್ರೆಯ ಬಳಿಕ ರಾಮಲಲ್ಲಾನಿಗೆ ಪೂಜೆ|

January 31, 2024
10:09 PM
ಲಕ್ನೋದಿಂದ ಆರು ದಿನಗಳ ಪಾದಯಾತ್ರೆಯನ್ನು ಪೂರ್ಣಗೊಳಿಸಿದ 350 ಮುಸ್ಲಿಂ ಭಕ್ತರು ಅಯೋಧ್ಯೆಗೆ ತಲುಪಿ ರಾಮ ಮಂದಿರಕ್ಕೆ ಪೂಜೆ ಸಲ್ಲಿಸಿದರು.

ಲಕ್ನೋದಿಂದ ಆರು ದಿನಗಳ ಪಾದಯಾತ್ರೆಯನ್ನು ಪೂರ್ಣಗೊಳಿಸಿದ 350 ಮುಸ್ಲಿಂ ಭಕ್ತರು ಅಯೋಧ್ಯೆಗೆ ತಲುಪಿ ರಾಮ ಮಂದಿರಕ್ಕೆ ಪೂಜೆ ಸಲ್ಲಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬೆಂಬಲಿತ ಮುಸ್ಲಿಂ ಸಂಘಟನೆಯಾದ ಮುಸ್ಲಿಂ ರಾಷ್ಟ್ರೀಯ ಮಂಚ್  ನೇತೃತ್ವದ  ಗುಂಪು ತಮ್ಮ ಕಾಲ್ನಡಿಗೆಯನ್ನು ಆರಂಭಿಸಿತ್ತು.

Advertisement

ಲಕ್ನೋ ಮತ್ತು ಅಯೋಧ್ಯೆ ನಡುವೆ ಸುಮಾರು 150 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಕ್ರಮಿಸಿದರು ಮತ್ತು ಅಯೋಧ್ಯೆಗೆ ತಲುಪಲು ಪ್ರತಿದಿನ 25 ಕಿಲೋಮೀಟರ್ ನಡೆದರು.ಕೊರೆಯುವ ಚಳಿಯ ನಡುವೆ ‘ಜೈ ಶ್ರೀ ರಾಮ್’ ಎಂದು ಜಪಿಸುತ್ತಾ ಮುಂದೆ ಸಾಗಿದ್ದರು. ಪ್ರತಿ 25 ಕಿಲೋಮೀಟರ್‌ ನಡೆದು ನಂತರ ಪಾದಯಾತ್ರೆ ನಿಲ್ಲಿಸಿದ್ದರು. ಮರುದಿನ ಬೆಳಿಗ್ಗೆ ತಮ್ಮ ಪ್ರಯಾಣವನ್ನು ಮುಂದುವರೆಸುತ್ತಿದ್ದರು.

ಮುಸ್ಲಿಂ ಆರಾಧಕರ ಈ ಕಾರ್ಯವು ಏಕತೆ, ಸಮಗ್ರತೆ, ಸಾರ್ವಭೌಮತೆ ಮತ್ತು ಸಾಮರಸ್ಯದ ಸಂದೇಶವನ್ನು ರವಾನಿಸುತ್ತದೆ ಎಂದು ಯಾತ್ರೆಯ ನೇತೃತ್ವ ವಹಿಸಿದ್ದ  ರಾಜಾ ರಯೀಸ್ ಮತ್ತು ಸಂಯೋಜಕ ಶೇರ್ ಅಲಿ ಖಾನ್ ಹೇಳಿದ್ದರು. ದೇಶ ಮತ್ತು ಮಾನವೀಯತೆಯ ಮೇಲಿನ ಪ್ರೀತಿಯು ಧರ್ಮ, ಜಾತಿ ಮತ್ತು ಪಂಥಕ್ಕಿಂತಲೂ ಮೊದಲಿನ ಆದ್ಯತೆ ನೀಡುತ್ತದೆ. ಯಾವುದೇ ಧರ್ಮವು ಇತರರಿಗೆ ಟೀಕೆ, ಅಪಹಾಸ್ಯ ಅಥವಾ ತಿರಸ್ಕಾರವನ್ನು ಕಲಿಸುವುದಿಲ್ಲ ಎಂದು ಅವರು ಹೇಳಿದರು.

350 Muslims undertake 6-day Padyatra to offer prayers at Ram Temple in Ayodhya. They covered approximately 150 kilometers on foot between Lucknow and Ayodhya & walked 25 kilometers daily to reach Ayodhya.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರ್ಪಸಂಸ್ಕಾರವು ಈ ಶಾಪದಿಂದ ಮುಕ್ತಿಯನ್ನು ಒದಗಿಸುವ ಮಾರ್ಗ
August 1, 2025
8:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-07-2025 | ಇನ್ನೊಂದು ವಾಯುಭಾರ ಕುಸಿತದ ಲಕ್ಷಣ |
July 31, 2025
1:37 PM
by: ಸಾಯಿಶೇಖರ್ ಕರಿಕಳ
ಹಾವೇರಿಯಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ ಮಾರಾಟ ಜಾಲ ಸಕ್ರಿಯ | ರಾಜ್ಯದ 639 ರೈತರಿಗೆ ವಂಚನೆ |
July 30, 2025
9:32 PM
by: The Rural Mirror ಸುದ್ದಿಜಾಲ
ಕಾಡಾನೆಗಳ ನಿಯಂತ್ರಣಕ್ಕೆ ಕೇಂದ್ರ ಅರಣ್ಯ ಸಚಿವರಿಗೆ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಮನವಿ
July 30, 2025
9:03 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group