ಲಕ್ನೋದಿಂದ ಆರು ದಿನಗಳ ಪಾದಯಾತ್ರೆಯನ್ನು ಪೂರ್ಣಗೊಳಿಸಿದ 350 ಮುಸ್ಲಿಂ ಭಕ್ತರು ಅಯೋಧ್ಯೆಗೆ ತಲುಪಿ ರಾಮ ಮಂದಿರಕ್ಕೆ ಪೂಜೆ ಸಲ್ಲಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬೆಂಬಲಿತ ಮುಸ್ಲಿಂ ಸಂಘಟನೆಯಾದ ಮುಸ್ಲಿಂ ರಾಷ್ಟ್ರೀಯ ಮಂಚ್ ನೇತೃತ್ವದ ಗುಂಪು ತಮ್ಮ ಕಾಲ್ನಡಿಗೆಯನ್ನು ಆರಂಭಿಸಿತ್ತು.
ಲಕ್ನೋ ಮತ್ತು ಅಯೋಧ್ಯೆ ನಡುವೆ ಸುಮಾರು 150 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಕ್ರಮಿಸಿದರು ಮತ್ತು ಅಯೋಧ್ಯೆಗೆ ತಲುಪಲು ಪ್ರತಿದಿನ 25 ಕಿಲೋಮೀಟರ್ ನಡೆದರು.ಕೊರೆಯುವ ಚಳಿಯ ನಡುವೆ ‘ಜೈ ಶ್ರೀ ರಾಮ್’ ಎಂದು ಜಪಿಸುತ್ತಾ ಮುಂದೆ ಸಾಗಿದ್ದರು. ಪ್ರತಿ 25 ಕಿಲೋಮೀಟರ್ ನಡೆದು ನಂತರ ಪಾದಯಾತ್ರೆ ನಿಲ್ಲಿಸಿದ್ದರು. ಮರುದಿನ ಬೆಳಿಗ್ಗೆ ತಮ್ಮ ಪ್ರಯಾಣವನ್ನು ಮುಂದುವರೆಸುತ್ತಿದ್ದರು.
ಮುಸ್ಲಿಂ ಆರಾಧಕರ ಈ ಕಾರ್ಯವು ಏಕತೆ, ಸಮಗ್ರತೆ, ಸಾರ್ವಭೌಮತೆ ಮತ್ತು ಸಾಮರಸ್ಯದ ಸಂದೇಶವನ್ನು ರವಾನಿಸುತ್ತದೆ ಎಂದು ಯಾತ್ರೆಯ ನೇತೃತ್ವ ವಹಿಸಿದ್ದ ರಾಜಾ ರಯೀಸ್ ಮತ್ತು ಸಂಯೋಜಕ ಶೇರ್ ಅಲಿ ಖಾನ್ ಹೇಳಿದ್ದರು. ದೇಶ ಮತ್ತು ಮಾನವೀಯತೆಯ ಮೇಲಿನ ಪ್ರೀತಿಯು ಧರ್ಮ, ಜಾತಿ ಮತ್ತು ಪಂಥಕ್ಕಿಂತಲೂ ಮೊದಲಿನ ಆದ್ಯತೆ ನೀಡುತ್ತದೆ. ಯಾವುದೇ ಧರ್ಮವು ಇತರರಿಗೆ ಟೀಕೆ, ಅಪಹಾಸ್ಯ ಅಥವಾ ತಿರಸ್ಕಾರವನ್ನು ಕಲಿಸುವುದಿಲ್ಲ ಎಂದು ಅವರು ಹೇಳಿದರು.
350 Muslims undertake 6-day Padyatra to offer prayers at Ram Temple in Ayodhya. They covered approximately 150 kilometers on foot between Lucknow and Ayodhya & walked 25 kilometers daily to reach Ayodhya.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…