Advertisement
ಸುದ್ದಿಗಳು

#Fishermen | ಬಂಗಾಳಕೊಲ್ಲಿಯಲ್ಲಿ ಸಿಲುಕಿದ್ದ 36 ಭಾರತೀಯ ಮೀನುಗಾರರು | ಸುರಕ್ಷಿತವಾಗಿ ಕರೆತಂದ ಭಾರತೀಯ ನೌಕಾಪಡೆ |

Share

ಮೀನುಗಾರಿಕೆ ಮೀನುಗಾರರ ಬದುಕು. ಸಮುದ್ರದಲ್ಲಿ ದೂರ ಹೋದಷ್ಟು ಮೀನು ಜಾಸ್ತಿ ಹಿಡಿಯಲು ಸಾಧ್ಯ. ಹಾಗಾಗಿ ಕಡಲ ಮಕ್ಕಳು ಸಮುದ್ರದಲ್ಲಿ ಕೆಲವೊಮ್ಮೆ ಮಿತಿ ಅರಿಯದೆ ದೂರ ಸಾಗುತ್ತಾರೆ. ಇದು ಅವರ ಪ್ರಾಣಕ್ಕೆ ಕುತ್ತು ತರುತ್ತೆ. ಅಂತಹ ಮೀನುಗಾರರನ್ನು ರಕ್ಷಿಸಲು ಭಾರತೀಯ ನೌಕಾಪಡೆ ಸದಾ ಸರ್ವ ಸನ್ನದ್ಧವಾಗಿರುತ್ತದೆ.

ಮೀನುಗಾರಿಕೆಂದು #Fishing ತೆರಳಿ ಬಂಗಾಳಕೊಲ್ಲಿಯಲ್ಲಿ #BayOfBengal ಸಿಲುಕಿಕೊಂಡಿದ್ದ 36 ಭಾರತೀಯ ಮೀನುಗಾರರನ್ನು ರಕ್ಷಿಸಿ ಸುರಕ್ಷಿತವಾಗಿ ಕರೆತರಲಾಗಿದೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ. ಭಾರತೀಯ ನೌಕಾ ಹಡಗುS ಖಂಜಾರ್ ಮೂಲಕ ತಮಿಳುನಾಡು ಕರಾವಳಿಯಿಂದ 130 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಸಿಲುಕಿದ್ದ 36 ಭಾರತೀಯ ಮೀನುಗಾರರನ್ನು ಸುರಕ್ಷಿತವಾಗಿ ಕರೆತರಲಾಗಿದೆ ಎಂದು ನೌಕಾಪಡೆಯ ವಕ್ತಾರ ಕಮಾಂಡರ್ ವಿವೇಕ್ ಮಧ್ವಲ್ ತಿಳಿಸಿದ್ದಾರೆ.

ಮೀನುಗಾರರು 3 ಮೀನುಗಾರಿಕಾ ಹಡಗುಗಳಲ್ಲಿ ತೆರಳಿದ್ದು, 30 ಗಂಟೆಗಳ ಕಾರ್ಯಾಚರಣೆಯ ಮೂಲಕ ಮೀನುಗಾರರನ್ನು ಅಪಾಯದಿಂದ ಪಾರು ಮಾಡಲಾಗಿದೆ. ಖಂಜಾರ್ ನೌಕೆ ಸಮುದ್ರದಲ್ಲಿ ಕಾರ್ಯಾಚರಣೆ ಮಾಡುತ್ತಿದ್ದ ವೇಳೆ ತಮಿಳುನಾಡು  ಕರಾವಳಿಯಿಂದ ಸರಿಸುಮಾರು 130 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮೂರು ಮೀನುಗಾರಿಕಾ ಹಡಗುಗಳಾದ ಶಬರನಾಥನ್, ಕಲೈವಾಣಿ ಮತ್ತು ಮಿಸಾಮಿ ಪತ್ತೆಯಾಗಿದೆ.

36 ಮೀನುಗಾರರು  ಮೂರು ಹಡಗುಗಳಲ್ಲಿ ತಮಿಳುನಾಡಿನ ನಾಗಪಟ್ಟಣದಿಂದ ತೆರಳಿದ್ದ ವೇಳೆ ಹಡಗಿನ ಇಂಧನ ಖಾಲಿಯಾಗಿದ್ದಲ್ಲದೇ ಪ್ರತಿಕೂಲ ಹವಾಮಾನ ಹಾಗೂ ಎಂಜಿನ್ ಸ್ಥಗಿತಗೊಂಡ ಕಾರಣ ಎರಡು ದಿನಗಳಿಂದ ಸಮುದ್ರದಲ್ಲಿ ಸಿಲುಕಿಕೊಂಡಿದ್ದರು ಎಂದು ಕಮಾಂಡರ್ ಮಧ್ವಲ್ ಹೇಳಿದ್ದಾರೆ. ಪ್ರತಿಕೂಲ ಹವಾಮಾನದ ನಡುವೆಯೂ 30 ಗಂಟೆಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಮೀನುಗಾರರನ್ನು ಸುರಕ್ಷಿತವಾಗಿ ಚೆನ್ನೈ ಬಂದರಿಗೆ ಕರೆತರಲಾಗಿದೆ ಎಂದು ವರದಿಗಳು ತಿಳಿಸಿವೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

17 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago