ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು ಅಸಹಜವಾಗಿ ಸಾವಿಗೀಡಾಗಿದ್ದು, ಪಿಸಿಸಿಎಫ್ ನೇತೃತ್ವದ ತಂಡ ತನಿಖೆ ನಡೆಸಲಿದೆ ಎಂದು ಪರಿಸರ ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದಾರೆ. ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಈ ಘಟನೆ ಅರಣ್ಯ ಇಲಾಖೆ ಮತ್ತು ಪ್ರಾಣಿ ಪ್ರೇಮಿಗಳಲ್ಲಿ ಆತಂಕ ಉಂಟು ಮಾಡಿದ್ದು, ಕಿಡಿಗೇಡಿಗಳು ವಿಷಪ್ರಸನ ಮಾಡಿ ಸಾಯಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರು ತನಿಖೆಗೆ ಆದೇಶ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯ ವನ್ಯಧಾಮದಲ್ಲಿ ಅರಣ್ಯ ಸಿಬ್ಬಂದಿ ಬೀಟ್‌ಗೆ ತೆರಳಿದ್ದಾಗ ಹುಲಿಗಳು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel