ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಬುಧವಾರವೂ ಏರಿಕೆ ಕಂಡಿದೆ. ಬುಧವಾರ ಮಧ್ಯಾಹ್ನದವರೆಗೆ 7 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಇದರಲ್ಲಿ 4 ತಿಂಗಳ ಗಂಡು ಮಗುವೂ ಸೇರಿದೆ. ಈ ಮೂಲಕ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 425 ಕ್ಕೆ ಏರಿಕೆಯಾಗಿದೆ.
ಬುಧವಾರ ಮಧ್ಯಾಹ್ನ 12 ಗಂಟೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ನಲ್ಲಿ ಕಲಬುರಗಿಯಲ್ಲಿ 4 ತಿಂಗಳ ಗಂಡು ಮಗು ಸೇರಿದಂತೆ ಹೊಸದಾಗಿ 7 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.
ಬುಧವಾರ 5 ಮಂದಿ ಕಲಬುರಗಿಯಲ್ಲಿ , 2 ಜನರಿಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel