ದೇಶದ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ, 2.28 ಲಕ್ಷ ಪಂಚಾಯತ್ ಗಳಿಗೆ ಕೆಲಸ ಮಾಡುವ ಸ್ಥಳಗಳಿವೆ. ದೇಶದ ಎಲ್ಲ ಪಂಚಾಯತ್ ಗಳಿಗೆ ಸಮಾನವಾಗಿ ಸಂಪನ್ಮೂಲಗಳ ಹಂಚಿಕೆಯನ್ನು ಕೇಂದ್ರ ಸರ್ಕಾರ ಖಾತರಿಪಡಿಸಲಿದೆ ಎಂದು ಕೇಂದ್ರ ಪಂಚಾಯತ್ ರಾಜ್ ಖಾತೆ ರಾಜ್ಯ ಸಚಿವ ಎಸ್.ಪಿ. ಸಿಂಗ್ ಬಘೇಲ್ ಲೋಕಸಭೆಯಲ್ಲಿ ಹೇಳಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಮಹಾರಾಷ್ಟ್ರ ಪಂಚಾಯತ್ ಚುನಾವಣೆಗಳನ್ನು ನಡೆಸುವ ಕುರಿತು ಸಂಸದ ಭಜರಂಗ್ ಸೋನೆವಾನೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚುನಾವಣಾ ವೆಚ್ಚವನ್ನೂ ಸಹ ರಾಜ್ಯ ಸರ್ಕಾರವೇ ಭರಿಸಬೇಕಾಗುತ್ತದೆ. ಸಂವಿಧಾನದ ನಿಬಂಧನೆಗಳನ್ನು ಪಾಲಿಸಲಾಗಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದಷ್ಟೇ ಕೇಂದ್ರ ಸರ್ಕಾರದ ಪಾತ್ರ ಎಂದು ಸ್ಪಷ್ಟಪಡಿಸಿದರು. ಪಂಚಾಯತ್ ರಾಜ್ ಚುನಾವಣೆ ನಡೆಸುವ ಸಾಂವಿಧಾನಿಕ ನಿಬಂಧನೆಗಳನ್ನು ರಾಜ್ಯ ಚುನಾವಣಾ ಆಯೋಗದ ವಿವೇಚನೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಪಂಚಾಯತ್ ರಾಜ್ ಖಾತೆ ರಾಜ್ಯ ಸಚಿವ ಎಸ್.ಪಿ. ಸಿಂಗ್ ಬಘೇಲ್ ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel