ಸುಳ್ಯ: ಸುಳ್ಯ ನಗರದಲ್ಲಿ ಐದು ರೂ ನೀಡಿದರೆ ಇನ್ನು 20 ಲೀಟರ್ ಶುದ್ಧ ಕುಡಿಯುವ ನೀರು ದೊರೆಯಲಿದೆ. ಬೇಸಿಗೆಯಲ್ಲಿ ಶುದ್ಧ ಕುಡಿಯುವ ನೀರಿಗೆ ಜನರು ಹಾಹಾಕಾರ ಪಡುವುದನ್ನು ತಪ್ಪಿಸಲು ಸುಳ್ಯ ನಗರ ಪಂಚಾಯತ್ ಹೊಸ ಯೋಜನೆ ರೂಪಿಸಿದೆ. ನ.ಪಂ. ವತಿಯಿಂದ ಎರಡು ಕಡೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿದ್ದು ಸೋಮವಾರ ಉದ್ಘಾಟನೆಗೊಂಡಿತು.
ನಗರ ಪಂಚಾಯತ್ ಸಮೀಪ ಮತ್ತು ಗಾಂಧಿನಗರದಲ್ಲಿ ಘಟಕಗಳು ಕಾರ್ಯಾಚರಿಸಲಿದೆ. ತಲಾ ನಾಲ್ಕು ಲಕ್ಷ ರೂ ವೆಚ್ಚದಲ್ಲಿ ಒಟ್ಟು ಎಂಟು ಲಕ್ಷ ರೂ ಖರ್ಚಿನಲ್ಲಿ ಎರಡು ಘಟಕವನ್ನು ಸ್ಥಾಪಿಸಲಾಗಿದೆ. ನಗರ ಪಂಚಾಯತ್ ಆಡಳಿತಾಧಿಕಾರಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮತ್ತು ನಗರ ಪಂಚಾಯತ್ ಮುಖ್ಯಾಧಿಕಾರಿ ಶ್ರೀಧರ್ ಆಸಕ್ತಿ ವಹಿಸಿ ಘಟಕವನ್ನು ಸ್ಥಾಪಿಸಲಾಗಿದೆ. ಬೆಳಿಗ್ಗೆ ಒಂಭತ್ತರಿಂದ ಸಂಜೆ ಆರರವರೆಗೆ ಘಟಕ ಕಾರ್ಯಾಚರಿಸಲಿದೆ. ಘಟಕದ ನಿರ್ವಹಣೆಗೆ ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು. ಜನರ ಬೇಡಿಕೆಯನ್ನು ಗಮನಿಸಿ ಇನ್ನೂ ಹೆಚ್ಚಿನ ಕಡೆಗಳಲ್ಲಿ ಘಟಕ ತೆರೆಯುವ ಯೋಜನೆ ರೂಪಿಸಲಾಗುತ್ತದೆ. 5 ರೂಗೆ 20 ಲೀಟರ್ ಮತ್ತು 2 ರೂಗೆ 10 ಲೀಟರ್ ನಂತೆ ನೀರು ಸರಬರಾಜು ಮಾಡಲಾಗುತ್ತದೆ. ಕುಡಿಯಲು ಮತ್ತು ಅಡುಗೆ ಮಾಡಲು ಈ ನೀರನ್ನು ಬಳಸಬಹುದು.
ನ.ಪಂ. ಅಡಳಿತಾಧಿಕಾರಿಯಾದ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಉದ್ಘಾಟಿಸಿದರು. ನ.ಪಂ.ಮುಖ್ಯಾಧಿಕಾರಿ ಶ್ರೀಧರ್, ಇಂಜಿನಿಯರ್ ಶಿವಕುಮಾರ್, ಕಂದಾಯ ನಿರೀಕ್ಷಕ ದೀಪಕ್, ಗ್ರಾಮ ಕರಣಿಕ ತಿಪ್ಪೇಶ್, ನ.ಪಂ.ಆರೋಗ್ಯಾಧಿಕಾರಿ ರವಿಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…