ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನೇನೋ ಕೊಟ್ಟು ಬಿಟ್ಟಿತ್ತು. ಈಗ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಅದನ್ನು ಈಡೇರಿಸಲು ಹರ ಸಾಹಸ ಪಡುತ್ತಿದೆ. 10 ಕೆಜಿ ಉಚಿತ ಅಕ್ಕಿ ಕೊಡುತ್ತೇವೆ ಎಂದಿದ್ದ ಕಾಂಗ್ರೆಸ್ ಕೇಂದ್ರ ಸರ್ಕಾರ ಕೊಡುತ್ತಿಲ್ಲ ಎಂದು ಗೋಬೆ ಕೂರಿಸಿತ್ತು. ಆದರೆ ಈಗ ಬೇರೆನೇ ಐಡಿಯಾ ಮಾಡಿದೆ.
ಕಾಂಗ್ರೆಸ್ ಚುನಾವಣಾ ಪೂರ್ವ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ಅಕ್ಕಿ ವಿತರಣೆಗೆ ತೊಡಕಾಗಿರುವುದರಿಂದ ಐದು ಕೆಜಿ ಅಕ್ಕಿ ಬದಲಿಗೆ ಹಣ ನೀಡಲು ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಕುರಿತು ಆಹಾರ ಸಚಿವ ಮುನಿಯಪ್ಪ ಮಾಹಿತಿ ನೀಡಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರಾದ ಎಚ್ಕೆ ಪಾಟೀಲ್ ಹಾಗೂ ಕೆಎಚ್ ಮುನಿಯಪ್ಪ ಸಂಪುಟ ಸಭೆಯ ನಿರ್ಧಾರಗಳನ್ನು ಪ್ರಕಟಿಸಿದರು.
ಅಕ್ಕಿ ಬದಲು ಜನರಿಗೆ ಹಣ ನೀಡಲು ಸಂಪುಟ ಸಭೆ ತೀರ್ಮಾನಿಸಿದೆ. 5 ಕೆಜಿ ಅಕ್ಕಿ ಬದಲು ಜನರಿಗೆ ಹಣ ನೀಡಲು ನಿರ್ಧರಿಸಲಾಗಿದೆ. ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಬಿಪಿಎಲ್ ಪಡಿತರ ಕಾರ್ಡ್ದಾರರಿಗೆ ಮಾಸಿಕ ತಲಾ 170 ರೂ. ನೀಡುತ್ತೇವೆ. ಜುಲೈ ತಿಂಗಳಿಂದಲೇ ಪಡಿತರದಾರರ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಮುನಿಯಪ್ಪ ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel