Advertisement
MIRROR FOCUS

5 ದಶಲಕ್ಷ ಮೆಟ್ರಿಕ್ ಟನ್ ಹಸಿರು ಜಲಜನಕ ಉತ್ಪಾದನೆ ಗುರಿ | ಸೂರ್ಯಘರ್ ಯೋಜನೆಯಡಿ ಉಚಿತ ವಿದ್ಯುತ್ ಪೂರೈಕೆ

Share

2030ರ ವೇಳೆಗೆ ವಾರ್ಷಿಕ 5 ದಶಲಕ್ಷ ಮೆಟ್ರಿಕ್ ಟನ್ ಹಸಿರು ಜಲಜನಕ ಉತ್ಪಾದನಾ ಗುರಿ ಹೊಂದಿದ್ದು, 2047ರ ವೇಳೆಗೆ ಈ ಪ್ರಮಾಣ 25 ದಶಲಕ್ಷ ಮೆಟ್ರಿಕ್ ಟನ್ ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ದೆಹಲಿಯಲ್ಲಿ ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

MINT SUSTAINABILITY ಶೃಂಗಸಭೆಯ 3ನೇ ಅವೃತ್ತಿಯಲ್ಲಿ ಭಾಗಿಯಾಗಿದ್ದ ಅವರು, ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಗೆ ದೇಶದಲ್ಲಿ ಅಭೂತ ಪೂರ್ವ ಬೆಂಬಲ ದೊರೆಯುತ್ತಿದೆ. ಈ ಯೋಜನೆಯಡಿ 1 ಕೋಟಿ ಮನೆಗಳಿಗೆ ಮಾಸಿಕ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ಗುರಿ ಹೊಂದಲಾಗಿದೆ. ಜೊತೆಗೆ ಪ್ರಧಾನಮಂತ್ರಿ ಕುಸುಮ್ ಯೋಜನೆ ಮೂಲಕವೂ ರೈತರಿಗೆ ಸೌರಶಕ್ತಿ ಪಂಪ್ ಸೆಟ್ ಗಳಿಗಾಗಿ ಸಹಾಯಧನ ಒದಗಿಸಲಾಗುತ್ತಿದೆ ಎಂದರು.ಪ್ರಧಾನಮಂತ್ರಿ ನೇತೃತ್ವದ ಸರ್ಕಾರ ನವೀಕರಿಸಬಹುದಾದ ಇಂಧನ ಮೂಲಗಳನ್ನು ಉತ್ತೇಜಿಸಲು ಹೆಚ್ಚಿನ ಆದ್ಯತೆ ನೀಡಿದ್ದು, ಹಸಿರು ಇಂಧನ ಬಳಕೆಯಲ್ಲಿ ಭಾರತ, ಅಭಿವೃದ್ಧಿ ಹೊಂದಿದ ರಾಷ್ಟ್ರಗಳೊಂದಿಗೆ ಸಾಗುತ್ತಿದೆ ಎಂದು ತಿಳಿಸಿದರು. ಸೌರ ಘಟಕ ಉತ್ತೇಜಿಸಲು 24 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಲಾಗುತ್ತಿದೆ. ಇದರಿಂದ 13 ಸಾವಿರ ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ 9 ಸಾವಿರ ಮೆಗಾವ್ಯಾಟ್ ಸೌರಶಕ್ತಿ , 4 ಸಾವಿರ ಮೆಗಾ ವ್ಯಾಟ್ ಪವನ ಶಕ್ತಿ ಜೊತೆಗೆ ಲಡಾಖ್ ನಲ್ಲಿ 12 ಸಾವಿರ ಮೆಗಾ ವ್ಯಾಟ್ ಬ್ಯಾಟರಿ ಆಧಾರಿತ ಇಂಧನ ಶಕ್ತಿ ಉತ್ಪಾದನೆಗೆ ಒತ್ತು ನೀಡಲಾಗಿದೆ ಎಂದು ಹೇಳಿದರು.‌

In Delhi, Union Minister of Renewable Energy Pralhad Joshi announced that the target for green hydrogen production is 5 million metric tons by 2030 and aims to increase it to 25 million metric tons by 2047.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

15 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

15 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

1 day ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

1 day ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

1 day ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

1 day ago