ಬಂಡೀಪುರದಲ್ಲಿ ಮೋದಿ ಸಫಾರಿ | ಗಂಧದ ಗುಡಿಯ ಪ್ರಕೃತಿ ಸೌಂದರ್ಯ ಸವಿದ ಪ್ರಧಾನಿ

April 9, 2023
12:57 PM

ಹುಲಿ ಯೋಜನೆಯ ಸುವರ್ಣ ಮಹೋತ್ಸವದ ಆಚರಣೆಗಾಗಿ ಬಂಡೀಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ‌ ಮೋದಿ ಅವರು ಬಂಡೀಪುರ ಹುಲಿ‌ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದ್ದಾರೆ.

ಮೈಸೂರಿನಿಂದ ಬೆಳಗ್ಗೆ ಮೇಲುಕಾಮನಹಳ್ಳಿ ಹೆಲಿಪ್ಯಾಡ್‌ಗೆ ಬಂದಿಳಿದ ಮೋದಿ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳಾದ ಮುರುಳಿ, ಸುಬ್ರಮಣ್ಯ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ‌ ಡಿ.ಎಸ್. ರಮೇಶ್ ಅವರಿಂದ ಸ್ವಾಗತ ಕೋರಿದರು. ಬೆಳಗ್ಗೆ 7:35ರ ವೇಳೆಗೆ ಬಂಡೀಪುರ ಕ್ಯಾಂಪಸ್‌ಗೆ ತಲುಪಿದ ಮೋದಿ ಅವರು ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

7:50ಕ್ಕೆ ತೆರೆದ ಜೀಪ್‌ನಲ್ಲಿ (ಮಹೀಂದ್ರಾ ಬೊಲೆರೊ ಕ್ಯಾಂಪರ್) ಸುಮಾರು 2 ಗಂಟೆ (22 ಕಿ.ಮೀ) ಸಫಾರಿ ಮಾಡಿದರು. ಈ ವೇಳೆ ಅರಣ್ಯದಲ್ಲಿ ಪ್ರಧಾನಿ ಸಂಚರಿಸಿ ಸೌಂದರ್ಯ ಸವಿದರು.

ಪ್ರಧಾನಿ ಮೋದಿ ಅವರೊಂದಿಗೆ ದೆಹಲಿಯಿಂದ ಬಂದಿದ್ದ ಏಮ್ಸ್ ವೈದ್ಯರ ತಂಡ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಎಸ್ ಪಿ ಪದ್ಮನಿ ಸಾಹು ಸೇರಿದಂತೆ ಜಿಲ್ಲೆಯ ಅಧಿಕಾರಿಗಳು, ಜಿಲ್ಲಾ ಆರೋಗ್ಯ‌ ಇಲಾಖೆಯ ವೈದ್ಯರ ತಂಡ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ‌ಇದ್ದರು. ಮೋದಿ ಅವರಿದ್ದ ವಾಹನದ ಜೊತೆಗೆ ಅಂಬುಲೆನ್ಸ್‌ ಸೇರಿದಂತೆ ಒಂಬತ್ತು ವಾಹನಗಳು ಸಾಗಿದ್ದವು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror