ಹುಲಿ ಯೋಜನೆಯ ಸುವರ್ಣ ಮಹೋತ್ಸವದ ಆಚರಣೆಗಾಗಿ ಬಂಡೀಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದ್ದಾರೆ.
ಮೈಸೂರಿನಿಂದ ಬೆಳಗ್ಗೆ ಮೇಲುಕಾಮನಹಳ್ಳಿ ಹೆಲಿಪ್ಯಾಡ್‌ಗೆ ಬಂದಿಳಿದ ಮೋದಿ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳಾದ ಮುರುಳಿ, ಸುಬ್ರಮಣ್ಯ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರಿಂದ ಸ್ವಾಗತ ಕೋರಿದರು. ಬೆಳಗ್ಗೆ 7:35ರ ವೇಳೆಗೆ ಬಂಡೀಪುರ ಕ್ಯಾಂಪಸ್‌ಗೆ ತಲುಪಿದ ಮೋದಿ ಅವರು ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.
7:50ಕ್ಕೆ ತೆರೆದ ಜೀಪ್‌ನಲ್ಲಿ (ಮಹೀಂದ್ರಾ ಬೊಲೆರೊ ಕ್ಯಾಂಪರ್) ಸುಮಾರು 2 ಗಂಟೆ (22 ಕಿ.ಮೀ) ಸಫಾರಿ ಮಾಡಿದರು. ಈ ವೇಳೆ ಅರಣ್ಯದಲ್ಲಿ ಪ್ರಧಾನಿ ಸಂಚರಿಸಿ ಸೌಂದರ್ಯ ಸವಿದರು.
ಪ್ರಧಾನಿ ಮೋದಿ ಅವರೊಂದಿಗೆ ದೆಹಲಿಯಿಂದ ಬಂದಿದ್ದ ಏಮ್ಸ್ ವೈದ್ಯರ ತಂಡ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಎಸ್ ಪಿ ಪದ್ಮನಿ ಸಾಹು ಸೇರಿದಂತೆ ಜಿಲ್ಲೆಯ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಇಲಾಖೆಯ ವೈದ್ಯರ ತಂಡ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು. ಮೋದಿ ಅವರಿದ್ದ ವಾಹನದ ಜೊತೆಗೆ ಅಂಬುಲೆನ್ಸ್ ಸೇರಿದಂತೆ ಒಂಬತ್ತು ವಾಹನಗಳು ಸಾಗಿದ್ದವು.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…