ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ರಾಜ್ಯ ಹಾಗೂ ಅಂತರಾಜ್ಯದಿಂದ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು, ಶಿವಮೊಗ್ಗ, ತಮಿಳುನಾಡು ಸೇರಿದಂತೆ ಇತರೆ ಸ್ಥಳಗಳಿಂದ 51 ಹೆಚ್ಚುವರಿ ವಿಶೇಷ ರೈಲಿನ ಸಂಪರ್ಕ ಕಲ್ಪಿಸಲಾಗಿದೆ ಎಂದು ನೈರುತ್ಯ ರೈಲ್ವೆಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಗಿರೀಶ್ ಧರ್ಮರಾಜ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 51 ವಿಶೇಷ ರೈಲಿನಲ್ಲಿ 11 ಕಾಯ್ದಿರಿಸದ ವಿಶೇಷ ರೈಲು, 27 ಎಕ್ಸ್ ಪ್ರೆಸ್ ವಿಶೇಷ ರೈಲು, 3 ತಾತ್ಕಾಲಿಕ ನಿಲ್ದಾಣ ಸೌಲಭ್ಯಗಳು, 2 ತಾತ್ಕಾಲಿಕ ವಿಸ್ತರಣೆಗಳು ಹಾಗೂ 8 ರೈಲುಗಳು ಅವಧಿ ವಿಸ್ತರಣೆಗಳು ಸೇರಿವೆ ಎಂದು ಮಾಹಿತಿ ನೀಡಿದ್ದಾರೆ. ಜನಸಂದಣಿ ನಿಯಂತ್ರಣಕ್ಕಾಗಿ ಹೆಚ್ಚುವರಿ 70 ಸಿಬ್ಬಂದಿ ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಆರ್ ಪಿಎಫ್ ಹಾಗೂ ಜಿಆರ್ ಪಿ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ರೈಲ್ವೆ ನಿಲ್ದಾಣದ ಚಲನವಲನಗಳ ಬಗ್ಗೆ 50 ಸಿಸಿಟಿವಿ ಕ್ಯಾಮರಾಗಳ ಮೂಲಕ ನಿಗಾ ಇಡಲಾಗುವುದು ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.

