6 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳ ಬದಲಾವಣೆ : ಜಿಲ್ಲೆಗೆ ವೀಕ್ಷಕರ ಆಗಮನ

October 19, 2019
6:34 AM

ಮಡಿಕೇರಿ : ಕೆಪಿಸಿಸಿ ಆದೇಶದಂತೆ ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ 6 ಬ್ಲಾಕ್ ಅಧ್ಯಕ್ಷರುಗಳ ಮುಂದುವರಿಕೆ ಅಥವಾ ಬದಲಾವಣೆ ಕುರಿತು ಅಭಿಪ್ರಾಯ ಸಂಗ್ರಹಿಸಲು ಕೆಪಿಸಿಸಿ ವೀಕ್ಷಕರುಗಳು ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ತಿಳಿಸಿದ್ದಾರೆ.

ಅ.21 ಬೆಳಗ್ಗೆ 11 ಗಂಟೆಗೆ ವೀಕ್ಷಕ ಟಿ.ಎಂ.ಶಾಹಿದ್ ಅವರು ಪೊನ್ನಂಪೇಟೆ ಬ್ಲಾಕ್ ಮತ್ತು ಮಧ್ಯಾಹ್ನ 3 ಗಂಟೆಗೆ ವಿರಾಜಪೇಟೆ ಬ್ಲಾಕ್‍ಗೆ ಭೇಟಿ ನೀಡಲಿದ್ದಾರೆ.
ಅ.24 ರಂದು ವೀಕ್ಷಕ ವೆಂಕಪ್ಪಗೌಡ ಅವರು ಬೆಳಗ್ಗೆ 11 ಗಂಟೆಗೆ ಸೋಮವಾರಪೇಟೆ ಬ್ಲಾಕ್, ಮಧ್ಯಾಹ್ನ 3 ಗಂಟೆಗೆ ಕುಶಾಲನಗರ ಬ್ಲಾಕ್, ಅ.26 ರಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿ ಬ್ಲಾಕ್ ಹಾಗೂ ಮಧ್ಯಾಹ್ನ 3 ಗಂಟೆಗೆ ನಾಪೊಕ್ಲು ಬ್ಲಾಕ್‍ಗಳಿಗೆ ಭೇಟಿ ನೀಡಲಿದ್ದಾರೆ.

ಈ ಬ್ಲಾಕ್‍ಗಳ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಎಲ್ಲಾ ಮುಂಚೂಣಿ ಘಟಕ ಮತ್ತು ವಲಯ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರುಗಳು ವೀಕ್ಷಕರು ಆಗಮಿಸುವ ಸಂದರ್ಭ ಹಾಜರಿರಬೇಕೆಂದು ಮಂಜುನಾಥ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಭೇಟಿ ಸ್ಥಳವನ್ನು ಆಯಾ ಬ್ಲಾಕ್ ಅಧ್ಯಕ್ಷರುಗಳು ನಿಗದಿಪಡಿಸಿ ತಿಳಿಸಬೇಕೆಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror