ಮಡಿಕೇರಿ : ಕೆಪಿಸಿಸಿ ಆದೇಶದಂತೆ ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ 6 ಬ್ಲಾಕ್ ಅಧ್ಯಕ್ಷರುಗಳ ಮುಂದುವರಿಕೆ ಅಥವಾ ಬದಲಾವಣೆ ಕುರಿತು ಅಭಿಪ್ರಾಯ ಸಂಗ್ರಹಿಸಲು ಕೆಪಿಸಿಸಿ ವೀಕ್ಷಕರುಗಳು ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ತಿಳಿಸಿದ್ದಾರೆ.
ಅ.21 ಬೆಳಗ್ಗೆ 11 ಗಂಟೆಗೆ ವೀಕ್ಷಕ ಟಿ.ಎಂ.ಶಾಹಿದ್ ಅವರು ಪೊನ್ನಂಪೇಟೆ ಬ್ಲಾಕ್ ಮತ್ತು ಮಧ್ಯಾಹ್ನ 3 ಗಂಟೆಗೆ ವಿರಾಜಪೇಟೆ ಬ್ಲಾಕ್‍ಗೆ ಭೇಟಿ ನೀಡಲಿದ್ದಾರೆ.
ಅ.24 ರಂದು ವೀಕ್ಷಕ ವೆಂಕಪ್ಪಗೌಡ ಅವರು ಬೆಳಗ್ಗೆ 11 ಗಂಟೆಗೆ ಸೋಮವಾರಪೇಟೆ ಬ್ಲಾಕ್, ಮಧ್ಯಾಹ್ನ 3 ಗಂಟೆಗೆ ಕುಶಾಲನಗರ ಬ್ಲಾಕ್, ಅ.26 ರಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿ ಬ್ಲಾಕ್ ಹಾಗೂ ಮಧ್ಯಾಹ್ನ 3 ಗಂಟೆಗೆ ನಾಪೊಕ್ಲು ಬ್ಲಾಕ್‍ಗಳಿಗೆ ಭೇಟಿ ನೀಡಲಿದ್ದಾರೆ.
ಈ ಬ್ಲಾಕ್‍ಗಳ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಎಲ್ಲಾ ಮುಂಚೂಣಿ ಘಟಕ ಮತ್ತು ವಲಯ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರುಗಳು ವೀಕ್ಷಕರು ಆಗಮಿಸುವ ಸಂದರ್ಭ ಹಾಜರಿರಬೇಕೆಂದು ಮಂಜುನಾಥ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಭೇಟಿ ಸ್ಥಳವನ್ನು ಆಯಾ ಬ್ಲಾಕ್ ಅಧ್ಯಕ್ಷರುಗಳು ನಿಗದಿಪಡಿಸಿ ತಿಳಿಸಬೇಕೆಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…
ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…
ಪಡಿತರ ಚೀಟಿಗೆ ಆಧಾರ್ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…
ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…
ಎಥೆನಾಲ್ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…