ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

May 22, 2025
9:39 PM

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ನೀರಿನ ಮಟ್ಟವು ಗಣನೀಯವಾಗಿ ಹೆಚ್ಚಾಗಿದ್ದು, 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರಿತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.

Advertisement
Advertisement

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೆರೆಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯವು 32,514 ದಶಲಕ್ಷ ಲೀಟರ್‌ ಗಳಾಗಿದೆ. ಕಳೆದ ಏಪ್ರೀಲ್-2025 ರಲ್ಲಿ ಕೆರೆಗಳ ಒಟ್ಟು ನೀರಿನ ಸಂಗ್ರಹಣೆಯ ಪ್ರಮಾಣವು 10,595 ದಶಲಕ್ಷ ಲೀಟರ್ ಗಳಿಗೆ ಕುಸಿದು ಕೇವಲ 3 ಕೆರೆಗಳಲ್ಲಿ ಮಾತ್ರ ಪೂರ್ಣ ಪ್ರಮಾಣದಲ್ಲಿ ನೀರು ತುಂಬಿತ್ತು. ಸುಮಾರು 63 ಕೆರೆಗಳಲ್ಲಿ ನೀರಿಲ್ಲದೆ ಒಣಗುವ ಹಂತದಲ್ಲಿತ್ತು.  ನಗರದಲ್ಲಿ ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ಒಟ್ಟು 26,056 ದಶಲಕ್ಷ ಲೀಟರ್‌ ನಷ್ಟು ನೀರು ಕೆರೆಗಳಲ್ಲಿ ಸಂಗ್ರಹವಾಗಿದ್ದು, ಏಪ್ರೀಲ್-2025ಕ್ಕೆ ಹೋಲಿಸಿದರೆ ನೀರಿನ ಪ್ರಮಾಣ ಸಾಕಷ್ಟು ಹೆಚ್ಚಾಗಿದೆ. ಇದೀಗ ಪಾಲಿಕೆ ವ್ಯಾಪ್ತಿಯ 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿರುತ್ತವೆ.  ತುಂಬಿರುವ ಎಲ್ಲಾ ಕೆರೆಗಳ ತೂಬುಗಳ ಬಳಿ ಹಾಗೂ ಕೆರೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ. ಕೆರೆಗಳು ನೀರು ಹೋಗುವ ಕಾಲುವೆಗಳಲ್ಲಿ ಕಸ-ಕಡ್ಡಿ, ಪ್ಲಾಸ್ಟಿಕ್ ಸೇರಿದಂತೆ ಇನ್ನಿತರೆ ತ್ಯಾಜ್ಯವನ್ನು ತೆರವುಗೊಳಿಸಲು ಸಿಬ್ಬಂದಿಗಳನ್ನು ನಿಯೋಜಿಸಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ
July 28, 2025
10:30 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ
July 28, 2025
10:23 PM
by: ದ ರೂರಲ್ ಮಿರರ್.ಕಾಂ
ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ
July 28, 2025
8:34 PM
by: The Rural Mirror ಸುದ್ದಿಜಾಲ
ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು
July 28, 2025
8:24 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group