ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ನೀರಿನ ಮಟ್ಟವು ಗಣನೀಯವಾಗಿ ಹೆಚ್ಚಾಗಿದ್ದು, 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರಿತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೆರೆಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯವು 32,514 ದಶಲಕ್ಷ ಲೀಟರ್ ಗಳಾಗಿದೆ. ಕಳೆದ ಏಪ್ರೀಲ್-2025 ರಲ್ಲಿ ಕೆರೆಗಳ ಒಟ್ಟು ನೀರಿನ ಸಂಗ್ರಹಣೆಯ ಪ್ರಮಾಣವು 10,595 ದಶಲಕ್ಷ ಲೀಟರ್ ಗಳಿಗೆ ಕುಸಿದು ಕೇವಲ 3 ಕೆರೆಗಳಲ್ಲಿ ಮಾತ್ರ ಪೂರ್ಣ ಪ್ರಮಾಣದಲ್ಲಿ ನೀರು ತುಂಬಿತ್ತು. ಸುಮಾರು 63 ಕೆರೆಗಳಲ್ಲಿ ನೀರಿಲ್ಲದೆ ಒಣಗುವ ಹಂತದಲ್ಲಿತ್ತು. ನಗರದಲ್ಲಿ ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ಒಟ್ಟು 26,056 ದಶಲಕ್ಷ ಲೀಟರ್ ನಷ್ಟು ನೀರು ಕೆರೆಗಳಲ್ಲಿ ಸಂಗ್ರಹವಾಗಿದ್ದು, ಏಪ್ರೀಲ್-2025ಕ್ಕೆ ಹೋಲಿಸಿದರೆ ನೀರಿನ ಪ್ರಮಾಣ ಸಾಕಷ್ಟು ಹೆಚ್ಚಾಗಿದೆ. ಇದೀಗ ಪಾಲಿಕೆ ವ್ಯಾಪ್ತಿಯ 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿರುತ್ತವೆ. ತುಂಬಿರುವ ಎಲ್ಲಾ ಕೆರೆಗಳ ತೂಬುಗಳ ಬಳಿ ಹಾಗೂ ಕೆರೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ. ಕೆರೆಗಳು ನೀರು ಹೋಗುವ ಕಾಲುವೆಗಳಲ್ಲಿ ಕಸ-ಕಡ್ಡಿ, ಪ್ಲಾಸ್ಟಿಕ್ ಸೇರಿದಂತೆ ಇನ್ನಿತರೆ ತ್ಯಾಜ್ಯವನ್ನು ತೆರವುಗೊಳಿಸಲು ಸಿಬ್ಬಂದಿಗಳನ್ನು ನಿಯೋಜಿಸಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ.
ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…
ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…
ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…