71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ದೆಹಲಿಯಲ್ಲಿ ನಡೆಯಿತು. ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ನಟ ಮೋಹನ್ ಲಾಲ್‌ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ದಾದಾ ಪಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು. ಯಶೋಧಾ ಪ್ರಕಾಶ್ ಅವರ ‘ಕಂದೀಲು ದ ರೇ ಆಫ್ ಹೋಪ್’ ಚಿತ್ರಕ್ಕೆ 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಅತ್ಯುತ್ತಮ ಕನ್ನಡ ಚಲನಚಿತ್ರ’ ಪ್ರಶಸ್ತಿ ನೀಡಲಾಯಿತು. ಅತ್ಯುತ್ತಮ ಕಥೆ ವಿಭಾಗದಲ್ಲಿ ಮೈಸೂರಿನ ವೈದ್ಯ ಡಾ.ಚಿದಾನಂದ ಎಸ್. ನಾಯಕ್ ನಿರ್ದೇಶನದ ಸನ್ ಫ್ಲವರ್‍ಸ್‌ಗೆ ಪ್ರಶಸ್ತಿ ಲಭಿಸಿದೆ. ಹಿಂದಿ ಚಿತ್ರ 12th Fail ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಗೆ ಭಾಜನವಾಗಿದೆ. ಅಂತೆಯೇ ಜವಾನ್ ಚಿತ್ರಕ್ಕಾಗಿ ನಟ ಶಾರೂಖ್ ಖಾನ್ ಮತ್ತು 12th Fail ಚಿತ್ರದ ನಟ ವಿಕ್ರಾಂತ್ ಮೆಸ್ಸೆ ಅತ್ಯುತ್ತಮ ನಟ ಪ್ರಶಸ್ತಿ ಹಂಚಿಕೊಂಡಿದ್ದಾರೆ. ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸುಳ್ಯ ತಾಲೂಕಿನ ಅಡಿಕೆ ತೋಟಗಳಲ್ಲಿ ಎಲೆಚುಕ್ಕಿ ರೋಗದಿಂದ ಭಾರೀ ನಷ್ಟ. ಬೆಳೆಸಾಲ ಮನ್ನಾ,…
ಜನವರಿ 11 ಮತ್ತು 12ರಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ…
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…