ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ನವದೆಹಲಿಯ ಕೆಂಪು ಕೋಟೆಯಲ್ಲಿ(RedFort) ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು. ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಪುತ್ಥಳಿಗೆ ಪ್ರಧಾನಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಕೆಂಪು ಕೋಟೆ ಕಡೆ ಆಗಮಿಸಿದರು. ನಂತರ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಐಎಎಫ್ ಹೆಲಿಕಾಪ್ಟರ್ ತ್ರಿವರ್ಣ ಧ್ವಜಕ್ಕೆ ಪುಷ್ಪವೃಷ್ಟಿ ಮಾಡಿತು.
ಸ್ವಾತಂತ್ರೋತ್ಸವ ಸಂದೇಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ನಾವು ತೆಗೆದುಕೊಳ್ಳುವ ನಿರ್ಧಾರ ಮುಂದಿನ ಒಂದು ಸಾವಿರ ವರ್ಷ ಭಾರತ ದಿಕ್ಕನ್ನು ತೋರಿಸಲಿದೆ. ಈ ಅವಧಿಯಲ್ಲಿ ತೆಗೆದುಕೊಳ್ಳುವ ನಿರ್ಧಾರ ಮುಂದಿನ ಒಂದು ಸಾವಿರ ವರ್ಷದಲ್ಲಿ ಸುವರ್ಣ ಅಕ್ಷರಗಳಲ್ಲಿ ಬರೆದಿಡುವ ಸಮಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ, 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಗುಲಾಮಿ ಮನಸ್ಥಿತಿಯಿಂದ ಹೊರ ಬರುವ ನಿರ್ಧಾರ ತೆಗೆದುಕೊಳ್ಳುವ ಸಮಯವಾಗಿದೆ. ಭಾರತ ಹೊಸ ಸಾಮರ್ಥ್ಯದೊಂದಿಗೆ ಎಲ್ಲರನ್ನು ಸೆಳೆಯಲಿದೆ. ಈ ಹಿಂದಿನ ಗುಲಾಮಿ ವ್ಯವಸ್ಥೆ ಮತ್ತು ಮುಂದಿನ ಒಂದು ಸಾವಿರ ವರ್ಷದ ಭವ್ಯ ಭಾರತದ ನಡುವೆ ನಾವಿದ್ದೇವೆ ಎಂದು ತಿಳಿಸಿದರು.
ಸ್ವಾತಂತ್ರ್ಯ ಹೋರಾಟಗಾರದಲ್ಲಿ ಹೋರಾಟ ಮಾಡಿದ, ಬಲಿದಾನ ನೀಡಿದ ಎಲ್ಲ ಹೋರಾಟಗಾರಿಗೆ ಗೌರವ ಸಲ್ಲಿಸುತ್ತೇನೆ. ಇದು ಅಮೃತ ಕಾಲದ ಮೊದಲ ವರ್ಷ. ಈ ಅವಧಿಯಲ್ಲಿ ನಾವು ತೆಗೆದುಕೊಳ್ಳುವ ನಿರ್ಧಾರ ದೇಶದ ಎಲ್ಲ ಜನರ ಹಿತಾಸಕ್ತಿ ಕಾಪಾಡಲಿದೆ. ಇಂದು ನಮ್ಮ ಯುವಕರಿಗೆ ಹೊಸ ಅವಕಾಶ ಸಿಕ್ಕಿದೆ. ನಮ್ಮ ಸರ್ಕಾರದ ನೀತಿಯೂ ಯುವ ಶಕ್ತಿಗೆ ಬಲ ನೀಡಲಿದೆ. ಸ್ಟಾರ್ಟ್ ಅಪ್‌ಗೆ ಅವಕಾಶ ನೀಡಿದೆ. ಭಾರತ ಈಗ ವಿಶ್ವದ ಮೂರನೇ ಅತಿದೊಡ್ಡ ಸ್ಟಾರ್ಟ್ ಅಪ್ ದೇಶವಾಗಿದೆ.
ಸಣ್ಣ ನಗರಗಳಿಂದಲೂ ಪ್ರತಿಭೆಗಳು ಹೊರ ಬರುತ್ತಿವೆ. ಸಣ್ಣ ಊರುಗಳು ಚಿಕ್ಕದಾಗಿರಬಹುದು, ಅವುಗಳ ಶಕ್ತಿ ದೊಡ್ಡದಿದೆ. ಬಡ ಕುಟುಂಬಗಳಿಂದ ಬರುವ ಯುವಕರು ಸಾಧನೆ ಮಾಡುತ್ತಿದ್ದಾರೆ. ಅವಕಾಶಗಳಿಗೆ ಕಡಿಮೆ ಏನು ಇಲ್ಲ. ಎಲ್ಲ ಅವಕಾಶಗಳನ್ನು ಸರ್ಕಾರ ನೀಡಲಿದೆ ಎಂದರು. ಮಹಿಳೆಯರಿಂದ ದೇಶ ಮುಂದುವರಿಯುತ್ತಿದೆ. ದೇಶದ ಅಭಿವೃದ್ಧಿಗೆ ಕೆಲಸ ಮಾಡುತ್ತಿರುವ ಎಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ದೇಶದಲ್ಲಿ ಜಿ20 ಕಾರ್ಯಕ್ರಮ ನಡೆಯುತ್ತಿವೆ. ದೇಶದ ಶಕ್ತಿ, ವಿವಿಧತೆಯನ್ನು ಪರಿಚಯಿಸಲಾಗುತ್ತಿದೆ. ಭಾರತ ಎಲ್ಲರನ್ನು ಆಕರ್ಷಿಸುತ್ತಿದೆ. ಭಾರತದ ರಪ್ತು ಹೆಚ್ಚಾಗುತ್ತಿದೆ. ಇನ್ನು ಭಾರತವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೊರೋನಾ ಕಾಲದಲ್ಲಿ ವಿಶ್ವ ನಮ್ಮ ಶಕ್ತಿಯನ್ನು ನೋಡಿದೆ. ಸಂಕಷ್ಟದ ಸಮಯದಲ್ಲೂ ಮಾನವೀಯತೆ ಮೆರೆದಿದ್ದೇವೆ. ಭಾರತದ ಮೇಲೆ ಹೊಸ ವಿಶ್ವಾಸ ಮೂಡಿದೆ. ಈ ಸಮಯವನ್ನು ನಾವು ಬಿಟ್ಟು ಕೊಡಬಾರದು ಎಂದು ಕರೆ ನೀಡಿದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…