ಇನೋವೇಟಿವ್ ಫಿಲ್ಮಂ ಅಕಾಡೆಮಿ ಬೆಂಗಳೂರಿನಲ್ಲಿ ಆಯೋಜಿಸಿರುವ ಮೂರು ದಿನಗಳ 7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಸಂಜಯ ಜಾಜು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಕೇರಳ, ತಮಿಳುನಾಡು ಸೇರಿದಂತೆ ಚಿತ್ರರಂಗದ ನಟ, ನಟಿಯರು, ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಮೂರು ದಿನಗಳ ಕಾರ್ಯಕ್ರಮದಲ್ಲಿ 20ಕ್ಕೂ ಹೆಚ್ಚು ಭಾಷೆಯ ನೂರಕ್ಕೂ ಅಧಿಕ ಸಿನಿಮಾ ಪ್ರದರ್ಶನ, 15ಕ್ಕೂ ಹೆಚ್ಚು ದೇಶಗಳ ಸಿನಿ ಆಸಕ್ತರು ಮತ್ತು ತಜ್ಞರಿಂದ ಪರಸ್ಪರ ಮಾಹಿತಿ ವಿನಿಮಯ ಮತ್ತು ಚರ್ಚೆ ನಡೆಯಲಿವೆ. ಬಳಿಕ ಸಂಜಯ್ ಜಾಜು, ಸಿನಿಮಾ, ಎಲ್ಲ ತರಹದ ಭಾವನೆಗಳನ್ನು ಒಳಗೊಂಡ ಸಂಕಲನ. ಮನೋರಂಜನೆಯ ಮುಖ್ಯ ತಾಣ ಸಿನಿಮಾ. ಇಂದು ಉತ್ಸಾಹಿ ಯುವಕರಿಂದ ಉತ್ತಮ ಚಿತ್ರಗಳು ನಿರ್ಮಾಣಗೊಳ್ಳುತ್ತಿವೆ. ಯುವ ಸಮುದಾಯಕ್ಕೆ ಸಹಕಾರ ಲಭಿಸಿದರೆ, ಭವಿಷ್ಯದಲ್ಲಿ ಗುಣಮಟ್ಟದ ಚಿತ್ರಗಳು ಹೊರಬರಲು ಸಾಧ್ಯವಾಗಲಿದೆ ಎಂದರು. ಈ ವೇಳೆ ನಟಿ ಮಾಲಾಶ್ರೀ ಅವರಿಗೆ ಆಕ್ಷನ್ ಕ್ವೀನ್ ಆಫ್ ಇಂಡಿಯಾ ಪ್ರಶಸ್ತಿ, ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಕೌಟುಂಬಿಕ ಮನರಂಜನಾ ಪ್ರಶಸ್ತಿ, ಅತ್ಯುತ್ತಮ ನಟ ಪ್ರಶಸ್ತಿಯನ್ನು ತೇಜ ಸಜ್ಜ ಪಡೆದರೆ, ಮುರಳಿ ಶರ್ಮಾ ಬಹುಮುಖ ನಟ ಪ್ರಶಸ್ತಿಯನ್ನು ಹಾಗೂ ಕುಟ್ಟಿ ಪದ್ಮಿನಿ ಅವರು ಭಾರತೀಯ ಚಿತ್ರರಂಗದ ಸ್ಫೂರ್ತಿ ಪ್ರಶಸ್ತಿ ಸ್ವೀಕರಿಸಿದರು.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…