ಭಾರಿ ತಿಮಿಂಗಿಲಕ್ಕೆ ಬಲೆ ಬೀಸಿದ ಲೋಕಾಯುಕ್ತ | ಶಾಸಕನ ಪುತ್ರನ ಬಳಿ 8.12 ಕೋಟಿ ಪತ್ತೆ| ಬರೆದಿದ್ದ ದಾಖಲೆ ಅಗಿದು ನುಂಗಿದ ಭೂಪ…! |

March 3, 2023
3:37 PM

 ದಾವಣಗೆರೆಯ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾನೆ. ಈ ಪ್ರಕರಣ ಸಂಬಂಧ ಲೋಕಾಯುಕ್ತ ಪೋಲೀಸರು ಪ್ರಶಾಂತ್ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.

Advertisement
Advertisement
Advertisement

ಈ ಹಿನ್ನೆಲೆಯಲ್ಲಿ ಪುತ್ರ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಕಾರಣ ದಾವಣಗೆರೆಯ ಚನ್ನಗಿರಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ರಾಜಿನಾಮೆ ಸಲ್ಲಿಸಿದ್ದಾರೆ.

Advertisement

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ವಸ್ತುಗಳ ಖರೀದಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಮುಖ್ಯ ಅಕೌಂಟೆಂಗ್ ಪ್ರಶಾಂತ್ ಮಾಡಾಳ್ ಗುತ್ತಿಗೆದಾರರಿಂದ 80 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಡಿದ್ದರು. 40 ಲಕ್ಷ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದರು.

ಪುತ್ರ ಪ್ರಶಾಂತ್ ಮಾಡಾಳ್ ಮನೆ ಹಾಗೂ ಕಚೇರಿಯಲ್ಲಿ ಒಟ್ಟು 8.12 ಕೋಟಿ ಕಂತೆ‌ ಕಂತೆ ಹಣ ಸಿಕ್ಕಿದೆ. ಆದರೂ ಇದು ನನ್ನ ಕುಟುಂಬದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ. ಆದ್ರೂ ನನ್ನ ಮೇಲೆ ಆಪಾದನೆ ಬಂದಿರುವುದರಿಂದ, ನೈತಿಕ ಹೊಣೆ ಹೊತ್ತು KSDL ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ವಿರುಪಾಕ್ಷಪ್ಪ ಹೇಳಿದ್ದಾರೆ.

Advertisement

ಲೋಕಾಯುಕ್ತ ದಾಳಿಯಿಂದ ಶಾಸಕ ಮಡಾಳ್ ವಿರೂಪಾಕ್ಷಪ್ಪ ಈ ತನಕ ಮಾಡಿರುವ ಭ್ರಷ್ಟಾಚಾರ ಪ್ರಕರಣ ಬಹಿರಂಗಗೊಳ್ಳುವ ಸಾಧ್ಯತೆ ಇದೆ. ಈ ಎಲ್ಲಾ ಕಾರಣದಿಂದ ಕೆ.ಎಸ್.ಡಿ.ಎಲ್ ನಲ್ಲಿ ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ಆಗಿರೋ ಶಂಕೆ ವ್ಯಕ್ತವಾಗಿದೆ.

ಪ್ರಶಾಂತ್ ಬ್ಯಾಂಕ್ ಖಾತೆಗಳ ಮೇಲೆ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಹಿನ್ನೆಲೆ ಅಕೌಂಟ್ ಗಳ  ಪರಿಶೀಲನೆಗೂ ಮುಂದಾಗಿದ್ದಾರೆ. ಪ್ರಶಾಂತ್ ಮಡಾಳ್ ಮತ್ತು ಕುಟುಂಬಸ್ಥರ ಅಕೌಂಟ್ ಪರಿಶೀಲನೆ ಮಾಡುತ್ತಿರುವ ಅಧಿಕಾರಿಗಳು ಅಕೌಂಟ್ ಟ್ರಾಂಜಾಕ್ಷನ್ ಬಗ್ಗೆ ಗಮನ ಹರಿಸಿದ್ದಾರೆ. ಲೋಕಾಯುಕ್ತ ದಾಳಿ ವೇಳೆ ಪ್ರಶಾಂತ್ ತಾನು ಬರೆದಿದ್ದ ಕೆಲವು ದಾಖಲೆಗಳನ್ನು ಅಗಿದು ನುಂಗಿದ್ದಾನೆ. ತರುವಾಯ ಲೋಕಾಯುಕ್ತರು ಅದನ್ನೆಲ್ಲಾ ವಾಂತಿ ಮಾಡಿಸಿ ಅಧಿಕಾರಿಗಳು ತೆಗೆದಿದ್ದಾರೆ ಎನ್ನಲಾಗಿದೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಹೊಸ ಬೆಳೆ | ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ” |
April 24, 2024
2:57 PM
by: ಪ್ರಬಂಧ ಅಂಬುತೀರ್ಥ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror