ದಾವಣಗೆರೆಯ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾನೆ. ಈ ಪ್ರಕರಣ ಸಂಬಂಧ ಲೋಕಾಯುಕ್ತ ಪೋಲೀಸರು ಪ್ರಶಾಂತ್ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪುತ್ರ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಕಾರಣ ದಾವಣಗೆರೆಯ ಚನ್ನಗಿರಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ರಾಜಿನಾಮೆ ಸಲ್ಲಿಸಿದ್ದಾರೆ.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ವಸ್ತುಗಳ ಖರೀದಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಮುಖ್ಯ ಅಕೌಂಟೆಂಗ್ ಪ್ರಶಾಂತ್ ಮಾಡಾಳ್ ಗುತ್ತಿಗೆದಾರರಿಂದ 80 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಡಿದ್ದರು. 40 ಲಕ್ಷ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದರು.
ಪುತ್ರ ಪ್ರಶಾಂತ್ ಮಾಡಾಳ್ ಮನೆ ಹಾಗೂ ಕಚೇರಿಯಲ್ಲಿ ಒಟ್ಟು 8.12 ಕೋಟಿ ಕಂತೆ ಕಂತೆ ಹಣ ಸಿಕ್ಕಿದೆ. ಆದರೂ ಇದು ನನ್ನ ಕುಟುಂಬದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ. ಆದ್ರೂ ನನ್ನ ಮೇಲೆ ಆಪಾದನೆ ಬಂದಿರುವುದರಿಂದ, ನೈತಿಕ ಹೊಣೆ ಹೊತ್ತು KSDL ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ವಿರುಪಾಕ್ಷಪ್ಪ ಹೇಳಿದ್ದಾರೆ.
ಲೋಕಾಯುಕ್ತ ದಾಳಿಯಿಂದ ಶಾಸಕ ಮಡಾಳ್ ವಿರೂಪಾಕ್ಷಪ್ಪ ಈ ತನಕ ಮಾಡಿರುವ ಭ್ರಷ್ಟಾಚಾರ ಪ್ರಕರಣ ಬಹಿರಂಗಗೊಳ್ಳುವ ಸಾಧ್ಯತೆ ಇದೆ. ಈ ಎಲ್ಲಾ ಕಾರಣದಿಂದ ಕೆ.ಎಸ್.ಡಿ.ಎಲ್ ನಲ್ಲಿ ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ಆಗಿರೋ ಶಂಕೆ ವ್ಯಕ್ತವಾಗಿದೆ.
ಪ್ರಶಾಂತ್ ಬ್ಯಾಂಕ್ ಖಾತೆಗಳ ಮೇಲೆ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಹಿನ್ನೆಲೆ ಅಕೌಂಟ್ ಗಳ ಪರಿಶೀಲನೆಗೂ ಮುಂದಾಗಿದ್ದಾರೆ. ಪ್ರಶಾಂತ್ ಮಡಾಳ್ ಮತ್ತು ಕುಟುಂಬಸ್ಥರ ಅಕೌಂಟ್ ಪರಿಶೀಲನೆ ಮಾಡುತ್ತಿರುವ ಅಧಿಕಾರಿಗಳು ಅಕೌಂಟ್ ಟ್ರಾಂಜಾಕ್ಷನ್ ಬಗ್ಗೆ ಗಮನ ಹರಿಸಿದ್ದಾರೆ. ಲೋಕಾಯುಕ್ತ ದಾಳಿ ವೇಳೆ ಪ್ರಶಾಂತ್ ತಾನು ಬರೆದಿದ್ದ ಕೆಲವು ದಾಖಲೆಗಳನ್ನು ಅಗಿದು ನುಂಗಿದ್ದಾನೆ. ತರುವಾಯ ಲೋಕಾಯುಕ್ತರು ಅದನ್ನೆಲ್ಲಾ ವಾಂತಿ ಮಾಡಿಸಿ ಅಧಿಕಾರಿಗಳು ತೆಗೆದಿದ್ದಾರೆ ಎನ್ನಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅಡಿಕೆ ಹಾಳೆ ತಟ್ಟೆಯ ನಿಷೇಧವು ಅಡಿಕೆ ಕೃಷಿಗೆ ನೇರವಾಗಿ ಮಾತ್ರವಲ್ಲ, ಪರೋಕ್ಷವಾಗಿ ಸತತ…
ತಿರುಗಾಟವು ಜ್ಞಾನವೃದ್ಧಿಗೆ ಹೇತು. ಓಡಾಡದವನ ಜ್ಞಾನಕ್ಕೆ ಉಸಿರು ಇರುವುದಿಲ್ಲ. ತಂತ್ರಜ್ಞಾನದ ವಾಯುವೇಗದ ಕಾಲಘಟ್ಟದಲ್ಲಿ…
ದೆಹಲಿಯಲ್ಲಿ ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…
ಮುಂದಿನ 5 ದಿನಗಳ ಕಾಲ ಕೇರಳದಲ್ಲಿಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ…