ಜಾಗತಿಕ ಆರೋಗ್ಯ ಭದ್ರತೆ ಮತ್ತು ಸುಸ್ಥಿರತೆಗೆ ಭಾರತ ಬದ್ಧವಾಗಿ ನಿಂತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ.
ಔಷಧ ನಿಯಂತ್ರಣಾ ಸಂಸ್ಥೆಗಳ 19ನೇ ಅಂತಾರಾಷ್ಟ್ರೀಯ ಸಮಾವೇಶದ ಉದ್ವಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತ, ಕೋವಿಡ್ ಸಾಂಕ್ರಾಮಿಕದ ವೇಳೆ, ಆರೋಗ್ಯ ಸ್ಥಿತಿ ಸ್ಥಾಪಕತ್ವದಲ್ಲಿ ಜಾಗತಿಕ ನಾಯಕನಾಗಿ ಹೊರಹೊಮ್ಮಿದ್ದು ಮಾತ್ರವಲ್ಲದೆ, ಔಷಧ ಪ್ರಪಂಚದಲ್ಲಿ ತನ್ನ ಪಾತ್ರವನ್ನುನಿರೂಪಿಸಿದೆ. ಭಾರತ, ಆರೋಗ್ಯ ರಕ್ಷಣೆ,ಮೂಲಸೌಕರ್ಯವನ್ನು ವಿಸ್ತರಿಸಿದ್ದು, ಮಾತ್ರವಲ್ಲದೆ, ದೇಶೀಯ ಮತ್ತು ಜಾಗತಿಕ ಬೇಡಿಕೆ ಪೂರೈಕೆಗಾಗಿ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಿದೆ. ಪ್ರಮುಖ ಔಷಧಗಳು ಮತ್ತು ಲಸಿಕೆಗಳು ಕಡಿಮೆ ದರದಲ್ಲಿ ಲಭ್ಯವಾಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು. ಆಮದು ಮಾಡಿಕೊಳ್ಳುವ ಔಷಧಗಳ ಪರೀಕ್ಷೆಗೆ, ವಿವಿಧ ಎಂಟು ಪ್ರಯೋಗಾಲಯಗಳು ಕಾರ್ಯ ನಿರ್ವಹಿಸುತ್ತಿದ್ದು, ಇನ್ನೂ ಎರಡು ಪ್ರಯೋಗಾಲಯಗಳು ಸ್ಥಾಪನೆಯಾಗುವ ಅಂತಿಮ ಹಂತದಲ್ಲಿವೆ. ಬಂದರುಗಳಲ್ಲಿ, ಎಂಟು ಮಿನಿ ಪ್ರಯೋಗಾಲಯಗಳು ಕಾರ್ಯ ನಿರ್ವಹಿಸುತ್ತಿವೆ. ಸದ್ಯ ಸುಮಾರು ಶೇಕಡ 95 ರಷ್ಟು ನಿಯಂತ್ರಣಾ ಪ್ರಕ್ರಿಯೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ವೈದ್ಯಕೀಯ ಉಪಕರಣಗಳ ಉದ್ಯಮವನ್ನೂ ಇದೀಗ ನಿಯಂತ್ರಣಕ್ಕೊಳಪಡಿಸಲಾಗಿದೆ ಎಂದು ನಡ್ಡಾ ತಿಳಿಸಿದರು.
ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ…
ಕೂಲಿ ಕಾರ್ಮಿಕರು ಜೀವನ ನಿರ್ವಹಣೆ ಮಾಡಲು ದೂರದ ನಗರಗಳಿಗೆ ವಲಸೆ ಹೋಗದೆ ಉದ್ಯೋಗ…
ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ…
ಭಾರತದಲ್ಲಿ 1.4 ಮಿಲಿಯನ್ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಈ ಪೈಕಿ ಸುಮಾರು…
ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ ಇದೆ. ಈಗಿನಂತೆ ಎಪ್ರಿಲ್ 2ರಿಂದ…
ರಾಜ್ಯದಲ್ಲಿ ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ.