Advertisement
MIRROR FOCUS

#HeavyRain| ಉತ್ತರ ಭಾರತದಲ್ಲಿ ವರುಣನ ಅಬ್ಬರ | ಹಿಮಾಚಲ, ಉತ್ತರಾಖಂಡದಲ್ಲಿ ಮಳೆಗೆ 81 ಸಾವು | ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ |

Share

ದಿನದಿಂದ ದಿನಕ್ಕೆ ಉತ್ತರ ಭಾರತದಲ್ಲಿ ವರುಣನ ಅರ್ಭಟ ಹೆಚ್ಚಾಗುತ್ತಿದೆ. ಹಿಮಾಚಲಪ್ರದೇಶ #HimachalPradesh  ಮತ್ತು ಉತ್ತರಾಖಂಡದಲ್ಲಿ#Uttarakhand ನಿರಂತರ ಮಳೆ #Rain ಮತ್ತು ಭೂಕುಸಿತದಿಂದ  ಸಾವನ್ನಪ್ಪಿದವರ ಸಂಖ್ಯೆ 81ಕ್ಕೆ ಏರಿದೆ. ಗಾಯಾಳುಗಳನ್ನು ರಕ್ಷಿಸಲು ಮತ್ತು ಭೂ ಕುಸಿತ ಮತ್ತು ಮನೆ ಕುಸಿತದ ಅವಶೇಷಗಳಿಂದ ದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರಿದಿದೆ. ಈ ದುರಂತದ ನಡುವೆಯೇ ಮುಂದಿನ ದಿನಗಳಲ್ಲಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರಾಖಂಡದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿದೆ. ಹಾಗೆ ಹಿಮಾಚಲ ಪ್ರದೇಶದಲ್ಲಿ ಮೃತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ. ಬಹುತೇಕ ಮೃತದೇಹಗಳು ಪತ್ತೆಯಾಗಿವೆ. ಕಳೆದ 3 ದಿನಗಳಲ್ಲಿ ಕನಿಷ್ಠ 71 ಜನರು ಸಾವನ್ನಪ್ಪಿದ್ದು, 13 ಮಂದಿ ನಾಪತ್ತೆಯಾಗಿದ್ದಾರೆ. ಭಾನುವಾರ ರಾತ್ರಿಯಿಂದ ಒಟ್ಟು 57 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಓಂಕಾರ್ ಚಂದ್ ಶರ್ಮಾ ತಿಳಿಸಿದ್ದಾರೆ.

ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಮಾಹಿತಿ ಪ್ರಕಾರ, ಜೂನ್ 24 ಮುಂಗಾರು ಪ್ರಾರಂಭವಾದಾಗಿನಿಂದ ರಾಜ್ಯದಲ್ಲಿ ಒಟ್ಟು 214 ಜನರು ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ. ಮತ್ತು 38 ಜನರು ನಾಪತ್ತೆಯಾಗಿದ್ದಾರೆ. ಸಮ್ಮರ್ ಹಿಲ್ ಮತ್ತು ಕೃಷ್ಣ ನಗರ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಸಮ್ಮರ್ ಹಿಲ್ ಸೈಟ್‌ನಿಂದ ಮೃತದೇಹವನ್ನು ವಶಪಡಿಸಿಕೊಳ್ಳಲಾಗುತ್ತಿದೆ ಎಂದು ಶಿಮ್ಲಾ ಡೆಪ್ಯುಟಿ ಕಮಿಷನರ್ ಆದಿತ್ಯ ನೇಗಿ ತಿಳಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕಾಂಗ್ರಾ ಜಿಲ್ಲೆಯ ಇಂದೋರಾ ಮತ್ತು ಫತೇಪುರ್ ಉಪವಿಭಾಗಗಳ ಪ್ರವಾಹ ಪೀಡಿತ ಪ್ರದೇಶಗಳಿಂದ 1,731 ಜನರನ್ನು ರಕ್ಷಿಸಲಾಗಿದೆ. ವಾಯುಪಡೆಯ ಹೆಲಿಕಾಪ್ಟರ್‌ಗಳು, ಸೇನಾ ಸಿಬ್ಬಂದಿ ಮತ್ತು ಎನ್‌ಡಿಆರ್‌ಎಫ್ ನೆರವಿನೊಂದಿಗೆ ಪ್ರವಾಹ ಪೀಡಿತ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸುವ ಕಾರ್ಯಾಚರಣೆ ನಡೆಯುತ್ತಿದೆ. ಹಿಮಾಚಲ ಪ್ರದೇಶವು ಈ ವರ್ಷ 54 ದಿನಗಳ ಮಾನ್ಸೂನ್‌ನಲ್ಲಿ ಈಗಾಗಲೇ 742 ಮಿಮೀ ಮಳೆಯನ್ನು ದಾಖಲಿಸಿದೆ. ಜೂನ್ 1 ರಿಂದ ಸೆಪ್ಟೆಂಬರ್ 30ರ ನಡುವೆ ಸರಾಸರಿ 730 ಮಿಮೀ ಮಳೆ ದಾಖಲಾಗಿದೆ. ಈ ಜುಲೈನಲ್ಲಿ ರಾಜ್ಯದಲ್ಲಿ ದಾಖಲಾಗಿರುವ ಮಳೆಯು ಕಳೆದ 50 ವರ್ಷಗಳಲ್ಲಿ ತಿಂಗಳ ಎಲ್ಲಾ ದಾಖಲೆಗಳನ್ನು ಮುರಿದಿದೆ ಎಂದು ಶಿಮ್ಲಾ ಹವಾಮಾನ ಕೇಂದ್ರದ ನಿರ್ದೇಶಕ ಸುರೀಂದರ್ ಪಾಲ್ ತಿಳಿಸಿದ್ದಾರೆ.

ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ:ಪಾಂಗ್ ಮತ್ತು ಭಾಕ್ರಾ ಅಣೆಕಟ್ಟುಗಳಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಿದ ಬಳಿಕ ಹೋಶಿಯಾರ್‌ಪುರ, ಗುರುದಾಸ್‌ಪುರ ಮತ್ತು ರೂಪನಗರ ಜಿಲ್ಲೆಗಳ ಹಲವು ಪ್ರದೇಶಗಳು ಮುಳುಗಡೆಯಾಗಿದ್ದು, ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ. ಭಾಕ್ರಾ ಮತ್ತು ಪಾಂಗ್ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಕ್ರಮವಾಗಿ 1,677 ಅಡಿ ಮತ್ತು 1,398 ಅಡಿಗಳಲ್ಲಿದೆ ಎಂದು ತಿಳಿಸಿದರು.

Source: News Portals

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

8 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago