ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರ ಆವರಿಸುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಹಲವು ಜಲಚರಗಳ ಸಾವಿಗೆ ಕಾರಣವಾಗುತ್ತಿದ್ದು, ಪ್ಲಾಸ್ಟಿಕ್ ಸಮುದ್ರ ಸೇರದಂತೆ ನಿಗ್ರಹಿಸುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ಪ್ರಸ್ತಾಪಿತ ಕೆ.ಶೂರು – ಬ್ಲೂ ಪ್ಯಾಕ್ ಯೋಜನೆಗೆ ಸಮರ್ಪಕವಾದ ವಿಸ್ತೃತ ಯೋಜನಾ ವರದಿ (ಡಿ.ಪಿ.ಆರ್) ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪರಿಸರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ತಮ್ಮ ಕಾರ್ಯಾಲಯದಲ್ಲಿ ಹಿರಿಯ ಪರಿಸರ ಅರ್ಥಶಾಸ್ತ್ರಜ್ಞ ಮತ್ತು ಕಾರ್ಯ ಗುಂಪಿನ ನಾಯಕ ಪಾಬ್ಲೋ ಸಿ. ಬೆನಿಟೆಜ್ ನೇತೃತ್ವದ ವಿಶ್ವಬ್ಯಾಂಕ್ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, 317 ಕಿಲೋ ಮೀಟರ್ ಕರುನಾಡ ಕರಾವಳಿಯಲ್ಲಿ ಪ್ರತಿನಿತ್ಯ 50 ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗುತ್ತಿದೆ ಎಂಬುದು ಆಘಾತಕಾರಿ ಅಂಶವಾಗಿದ್ದು, ಇದರಿಂದ ಸಮುದ್ರ ತಟಕ್ಕೆ ಬಂದು ಮೊಟ್ಟೆ ಇಟ್ಟು ಮರಿ ಮಾಡುವ ಆಮೆಯೇ ಮೊದಲಾದ ಜಲಚರಗಳ ಸಂತಾನೋತ್ಪತ್ತಿಗೆ ಬಾಧಕವಾಗುತ್ತಿದೆ ಎಂಬ ಅಂಶದ ಬಗ್ಗೆ ಸಚಿವರು ವ್ಯಾಕುಲ ವ್ಯಕ್ತಪಡಿಸಿದರು.
ಮಾನವರ ಮತ್ತು ಸಮಸ್ತ ಜೀವಸಂಕುಲದ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತಿರುವ ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಿಸುವ ಅಗತ್ಯ ಹಿಂದೆಂದಿಗಿಂತ ಇಂದು ಹೆಚ್ಚಿದೆ ಎಂದು ಪ್ರತಿಪಾದಿಸಿದ ಸಚಿವರು ಕರುನಾಡ ಕರಾವಳಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಆಗುತ್ತಿರುವ ದುಷ್ಪರಿಣಾಮ ತಗ್ಗಿಸುವ ನಿಟ್ಟಿನಲ್ಲಿ ಈ ಯೋಜನೆ ಸಹಕಾರಿ ಆಗಬಹುದು ಎಂದು ತಿಳಿಸಿದರು.
ನಿಯೋಗದಲ್ಲಿದ್ದ ಸದಸ್ಯರು ಕರಾವಳಿಯಲ್ಲಿರುವ ಮೀನುಗಾರರು, ಮೀನುಗಾರಿಕೆಗೆ ವಿರಾಮವಿದ್ದ ಸಂದರ್ಭದಲ್ಲಿ ಕಡಲತಡಿಯಲ್ಲಿ ಸಂಗ್ರಹವಾದ ಪ್ಲಾಸ್ಟಿಕ್ ತ್ಯಾಜ್ಯ ತೆರವು ಮಾಡಬಹುದು. ಮೀನು ಹಿಡಿಯುವುದಕ್ಕಿಂತ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವೇ ಅವರಿಗೆ ಹೆಚ್ಚು ಲಾಭದಾಯಕ ಆಗುತ್ತದೆ ಎಂದು ತಿಳಿಸಿದರು.
ಬ್ಲೂ ಪ್ಯಾಕ್ ಯೋಜನೆಯ ಒಟ್ಟು 840 ಕೋಟಿ ರೂ. ಆಗಿದ್ದು, ಇದರಲ್ಲಿ ಶೇ.70ರಷ್ಟನ್ನು ವಿಶ್ವಬ್ಯಾಂಕ್ ಸಾಲದ ರೂಪದಲ್ಲಿ ನೀಡಲಿದೆ. ರಾಜ್ಯ ಸರ್ಕಾರ ಶೇ.30ರಷ್ಟು ಭರಿಸಬೇಕಾಗುತ್ತದೆ. ಪ್ರಾಥಮಿಕ ಯೋಜನಾ ವರದಿ (ಪಿಪಿಆರ್)ಗೆ ನೀತಿ ಆಯೋಗ ಮತ್ತು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಬೆಂಬಲವಿದೆ ಎಂದು ಅಧಿಕಾರಿಗಳು ವಿವರಿಸಿದರು.
ಈ ಸಂದರ್ಭದಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಉನ್ನತಾಧಿಕಾರಿಗಳಾದ ಬ್ರಿಜೇಶ್ ಕುಮಾರ್ ದೀಕ್ಷಿತ್ ಮತ್ತು ವಿಜಯ ಮೋಹನ್ ರಾಜ್ ಮತ್ತಿತರರರು ಭಾಗಿಯಾಗಿದ್ದರು.
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…