ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ ಪ್ರದೇಶದಲ್ಲೇ 50 ಸಾವಿರ ಶಿಕ್ಷಣ ಸಂಸ್ಥೆಗಳು ಬಂದ್ ಆಗಿವೆ. ಸರ್ಕಾರಿ ಶಾಲೆಗಳು ಬಂದ್ ಆದರೆ, ಬಡ ಮಕ್ಕಳ ಪರಸ್ಥಿತಿ ಹೇಗೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಮಾಜಿ ಸಚಿವ ದಿವಂಗತ ಕೆ.ಎಚ್.ಪಾಟೀಲ ಜನ್ಮ ಶತಮಾನೋತ್ಸವ ಕಾರ್ಯಕ್ರಮನ್ನು ಗದಗದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕೇಂದ್ರೀಯ ವಿದ್ಯಾಲಯ, ವಿಶ್ವವಿದ್ಯಾಲಯಗಳಲ್ಲಿ ಶೇಕಡ 50 ರಷ್ಟು ಹುದ್ದೆಗಳು ಖಾಲಿ ಇವೆ. ಹೈದ್ರಾಬಾದ್ ಕರ್ನಾಟಕದ ಭಾಗದಲ್ಲಿ 37 ಸಾವಿರ ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಸರಿಯಾಗಿ ಅನುದಾನ ನೀಡುತ್ತಿಲ್ಲ ಎಂದು ಆರೋಪಿಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel