Advertisement
Advertisement
ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಗಗನಚುಂಬಿ ಕಟ್ಟಡಗಳಲ್ಲಿ ಬೆಂಕಿ ನಂದಿಸುವ ಲ್ಯಾಡರ್ ವಾಹನ ಬೆಂಗಳೂರಿಗೆ ಬಂದಿದೆ.
ಈ ವಾಹನದ ಮೂಲಕ 90 ಮೀಟರ್ ಎತ್ತರದವರೆಗಿನ ಕಟ್ಟಡಗಳಲ್ಲಿ ಬೆಂಕಿ ನಂದಿಸಬಹುದಾಗಿದೆ. ಈ ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್ ಅನ್ನು ರಾಜ್ಯ ಅಗ್ನಿ ಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಲೋಕಾರ್ಪಣೆ ಮಾಡಲಿದ್ದಾರೆ.
Advertisement
ರಾಜ್ಯ ಸರ್ಕಾರ ಸುಮಾರು 30 ಕೋಟಿ ವೆಚ್ಚದಲ್ಲಿ ಈ ವಾಹನವನ್ನು ಖರೀದಿಸಿದ್ದು, ಈ ವಾಹನವನ್ನು ಫಿನ್ಲೆಂಡ್ ದೇಶದಿಂದ ತರಿಸಲಾಗಿದೆ.
ನಾಳೆ ಈ ವಾಹನವನ್ನು ಸರ್ಕಾರ ಅಗ್ನಿಶಾಮಕ ಇಲಾಖೆಗೆ ಹಸ್ತಾಂತರಿಸಲಿದೆ. ಇದಕ್ಕೂ ಮೊದಲು ಮುಂಬೈ ನಗರದಲ್ಲಿ ಈ ವಾಹನವನ್ನು ಬಳಸಲಾಗುತ್ತಿತ್ತು, ಇದೀಗ ರಾಜ್ಯಕ್ಕೆ ಕಾಲಿಟ್ಟಿದೆ. ನಗರದಲ್ಲಿ ಹೆಚ್ಚುತ್ತಿರುವ ಗಗನಚುಂಬಿ ಕಟ್ಟಡಗಳ ಬೆಂಕಿ ನಂದಿಸಲು ಈ ವಾಹನವನ್ನು ಬಳಸಲಾಗುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement