94 ಸಿ ಹಾಗೂ 94 ಸಿಸಿ ಅಡಿ ಅರ್ಹ ಮನೆಗಳಿಗೂ ಪರಿಹಾರ

June 30, 2019
2:00 PM

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ 94 ಸಿ ಮತ್ತು 94 ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದು, ಸಕ್ರಮಕ್ಕೆ ಅರ್ಹತೆ ಪಡೆದಿದ್ದ ಮನೆಗಳು ಪ್ರಕೃತಿ ವಿಕೋಪದಡಿ ಹಾನಿಗೊಳಗಾಗಿದ್ದರೆ ಅಂತಹ ಮನೆಗಳಿಗೂ ಸಹ ನಿಯಮಾನುಸಾರ ಪರಿಹಾರ ನೀಡಲು ಆದೇಶಿಸಲಾಗಿದೆ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಅವರು ತಿಳಿಸಿದ್ದಾರೆ.

Advertisement
Advertisement

ಇತ್ತೀಚೆಗೆ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಹಾಗೂ ಬರ ಪರಿಹಾರ ಕಾಮಗಾರಿ ಪರಿಶೀಲನೆಯನ್ನು ಕೈಗೊಂಡ ಸಂದರ್ಭದಲ್ಲಿ ಜನ ಪ್ರತಿನಿಧಿಗಳು, ಸಂತ್ರಸ್ತರು ಹಾಗೂ ಅಧಿಕಾರಿಗಳು ಈ ವಿಷಯವನ್ನು ಸಚಿವರ ಗಮನಕ್ಕೆ ತಂದು ವಿನಂತಿಸಿದ್ದರು. ಇದಕ್ಕೆ ತಕ್ಷಣ ಸಕಾರಾತ್ಮಕವಾಗಿ ಸ್ಪಂದಿಸಿದ ಕಂದಾಯ ಸಚಿವರು ಈ ಬಗ್ಗೆ ಸರಕಾರದಿಂದ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿಕೊಂಡಿದ್ದ ಹಲವು ಸಂತ್ರಸ್ತರು ಮನೆ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ್ದು, ಇವರು ಅರ್ಹತೆ ಪಡೆದಿದ್ದಾಗ್ಯೂ ಪ್ರವಾಹದಲ್ಲಿ ಮನೆ ಕೊಚ್ಚಿ ಹೋದ ಪ್ರಯುಕ್ತ ಸೂಕ್ತ ಪರಿಹಾರ ದೊರಕದೆ ತೊಂದರೆಗೀಡಾಗಿದ್ದರು. ಈ ಆದೇಶದಿಂದಾಗಿ ಇಂತಹ ಸಂತ್ರಸ್ತರಿಗೆ ಅನುಕೂಲವಾಗಲಿದೆ ಎಂದು ಸಚಿವರು ವಿವರಿಸಿದ್ದಾರೆ.

Advertisement

ಮುಂದುವರೆದು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಸಿ ಮತ್ತು 94 ಸಿಸಿ ಅಡಿ ಅರ್ಹವಿದ್ದರೆ ಸಿ ಮತ್ತು ಡಿ ವರ್ಗೀಕೃತ ಜಮೀನುಗಳಲ್ಲಿ ದಿನಾಂಕ 01-01-2015 ರ ಪೂರ್ವದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಲು ಮತ್ತು ಕಂದಾಯ ಇಲಾಖೆಯ ಸುಪರ್ದಿಯಲ್ಲಿರುವ ಸಿ ಮತ್ತು ಡಿ ವರ್ಗೀಕೃತ ಜಮೀನುಗಳಲ್ಲಿ ಬಗರ್ ಹುಕುಂ ಅಡಿ ಸಕ್ರಮೀಕರಣ ಕೋರಿ ಬಾಕಿ ಇರುವ ಅರ್ಜಿಗಳನ್ನು ಸಹ ವಿಲೇವಾರಿ ಮಾಡಲು ಆದೇಶಿಸಲಾಗಿದೆ ಎಂದು ಸಚಿವರು ಈ ಸಂದರ್ಭದಲ್ಲಿ ಹೇಳಿದ್ದಾರೆ.
ಸಿ ಮತ್ತು ಡಿ ವರ್ಗೀಕೃತ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಗ್ಗೆ ಜಿಲ್ಲೆಯ ಜನ ಪ್ರತಿನಿಧಿಗಳು ಮೇಲ್ಕಂಡ ಪರಿಶೀಲನಾ ಸಭೆಯ ಸಂದರ್ಭದಲ್ಲಿ ಸಚಿವರ ಗಮನಕ್ಕೆ ತಂದು ಈ ಬಗ್ಗೆ ವಿನಂತಿಸಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರೀ ಮಳೆ ಹಿನ್ನೆಲೆ | ಜೂ. 27ರಂದು ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ |
June 26, 2024
7:19 PM
by: ದ ರೂರಲ್ ಮಿರರ್.ಕಾಂ
ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ | ವಿಶೇಷ ಅನುಬಂಧ ಕಾರ್ಯಕ್ರಮ
June 23, 2024
7:56 PM
by: ದ ರೂರಲ್ ಮಿರರ್.ಕಾಂ
ವಿಪರೀತ ಬೀಳುತ್ತಿರುವ ಎಳೆ ಅಡಿಕೆ | ಮುಂದಿನ ವರ್ಷದ ಅಡಿಕೆ ಇಳುವರಿ ಮೇಲೆ ಹೊಡೆತ.. | ತಾಪಮಾನ ಕಾರಣ..?
June 22, 2024
10:51 AM
by: ಮಹೇಶ್ ಪುಚ್ಚಪ್ಪಾಡಿ
ಕುಕ್ಕೆ ಸುಬ್ರಹ್ಮಣ್ಯ | ನದಿಗೆ ಪ್ಲಾಸ್ಟಿಕ್‌ ಎಸೆಯಬೇಡಿ…| ದಂಡ ಕಟ್ಟಲು ಸಿದ್ಧರಾಗಿ…! | ತ್ಯಾಜ್ಯ ಎಸೆದ ವ್ಯಕ್ತಿಗೆ ದಂಡ ವಿಧಿಸಿದ ಪಂಚಾಯತ್‌ |
June 21, 2024
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror