ಬೆಂಗಳೂರು ನಗರ ಒಂದರಲ್ಲೇ ವರ್ಷಕ್ಕೆ 943 ಟನ್ ಅನ್ನ ವ್ಯರ್ಥವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಕೆವಿಕೆ ಅಧ್ಯಯನದಲ್ಲಿ ವರ್ಷಕ್ಕೆ ಸುಮಾರು 360 ಕೋಟಿ ಮೌಲ್ಯದ ಆಹಾರ ವ್ಯರ್ಥವಾಗುತ್ತಿದೆ ಎಂಬುದನ್ನು ಉಲ್ಲೇಖಿಸಲಾಗಿದೆ. ಅನ್ನವನ್ನು ಚೆಲ್ಲುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ ಎಂದು ಅಭಿಪ್ರಾಯಪಟ್ಟಿದ್ದಾರೆ. ಹಸಿವಿನ ಸಂಕಟ ಅನ್ನದ ಮೌಲ್ಯ ತಿಳಿದಿರುವುದರಿಂದಲೇ ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಇದೇ ವೇಳೆ ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ, ಕಾಳಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಆಹಾರದ ಬಗ್ಗೆ ಜಾಗ್ರತೆ, ಸಣ್ಣ ರೈತರ ರಕ್ಷಣೆ, ನಾಗರಿಕ ಸಮಾಜದ ಜವಾಬ್ದಾರಿ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.

