ಮಡಿಕೇರಿ: ಜಮ್ಮು, ಕಾಶ್ಮೀರ ಮತ್ತು ಪುಲ್ವಾಮದಲ್ಲಿ ಉಗ್ರರ ದಾಳಿ ನಡೆದು ಸೈನಿಕರು ಹುತಾತ್ಮರಾದ ಬಳಿಕ ಯುವ ಸಮೂಹದಲ್ಲಿ ಸೇನೆಗೆ ಸೇರುವ ಕಿಚ್ಚು ಹೆಚ್ಚಾಗಿದೆ. ಇದಕ್ಕೆ ಪೂರಕ ಎಂಬಂತೆ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆರು ದಿನಗಳ ಕಾಲ ನಡೆಯುತ್ತಿರುವ ಸೇನಾ ಭರ್ತಿ ರಾಲಿಯಲ್ಲಿ ಪಾಲ್ಗೊಳ್ಳಲು ಸಾವಿರಾರು ಯುವಕರು ಆಗಮಿಸಿದ್ದಾರೆ.
ಕೊಡಗು ಜಿಲ್ಲೆ ಮಾತ್ರವಲ್ಲದೆ ರಾಜ್ಯದ ವಿವಿಧ ಜಿಲೆಗಳಿಂದ ಆಗಮಿಸಿರುವ ಯುವ ಸಮೂಹ ದೇಶಭಕ್ತಿಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದೆ. ದೇಶಕ್ಕಾಗಿ ಪ್ರಾಣ ನೀಡಲೂ ಸಿದ್ಧ ಎನ್ನುವ ಹುಮ್ಮಸ್ಸಿನಲ್ಲಿ ಸೇನೆಗೆ ಭರ್ತಿಯಾಗಲು ಬಂದಿರುವುದಾಗಿ ಹೇಳಿಕೊಂಡಿರುವ ಯುವಕರು ಎಲ್ಲಾ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸುತ್ತಿದ್ದಾರೆ. ಮಡಿಕೇರಿಯ ಮಳೆ, ಚಳಿಗೆ ಅಂಜದೆ ಧೈರ್ಯವಾಗಿ ಮೈಯೊಡ್ಡಿ ಮುಂಜಾನೆ 5 ಗಂಟೆಯಿಂದಲೇ ಓಟ, ಹಾರಾಟ ಸೇರಿದಂತೆ ವಿವಿಧ ಕಸರತ್ತುಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ.
ಸೇನಾ ನೇಮಕಾತಿ ರಾಲಿಯಲ್ಲಿ ಪಾಲ್ಗೊಳ್ಳಲು ಸುಮಾರು 9,572 ಮಂದಿ ಹೆಸರು ನೋಂದಾಯಿಸಿದ್ದಾರೆ. ಮೊದಲ ದಿನ 2,445 ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿತ್ತು, ಇವರಲ್ಲಿ 1,948 ಮಂದಿ ಹಾಜರಾಗಿದ್ದರು. ಎರಡನೇ ದಿನವಾದ ಸೋಮವಾರ 2,481 ಮಂದಿಯನ್ನು ಆಹ್ವಾನಿಸಲಾಗಿತ್ತು, ಇವರಲ್ಲಿ 1,825 ಮಂದಿ ಅಭ್ಯರ್ಥಿಗಳು ಹಾಜರಾಗಿ ಓಟ, ಉದ್ದ ಜಿಗಿತ, ಎತ್ತರ ಜಿಗಿತ ಹೀಗೆ ವಿವಿಧ ದೈಹಿಕ ಸಾಮರ್ಥ್ಯ ಪರೀಕ್ಷೆಗಳಲ್ಲಿ ಪಾಲ್ಗೊಂಡಿದ್ದರು ಎಂದು ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಲೆ.ಕ.ಗೀತಾ ಅವರು ಮಾಹಿತಿ ನೀಡಿದರು.
ಸೇನಾ ನೇಮಕಾತಿ ರ್ಯಾಲಿ ಸ್ಥಳಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಮೂಲಭೂತ ಸೌಲಭ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಸೇನಾ ಅಧಿಕಾರಿ ಅವರು ಸೇನಾ ನೇಮಕಾತಿ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಜಿಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀ ಬಾಯಿ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…