ಕನ್ನಡ ಚಿತ್ರರಂಗಕ್ಕೀಗ ಸುವರ್ಣ ಕಾಲ ಎನ್ನಬಹುದು. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ಚಿತ್ರರಸಿಕರು ಒಪ್ಪಿಕೊಂಡು, ಯಶಸ್ವಿಗೊಳಿಸಿದ್ದಾರೆ. ಅಂತಹುದೇ ವಿಭಿನ್ನ ಕಥೆಯ ಚಿತ್ರ ‘ಇನಾಮ್ದಾರ್’. ಈಚೆಗೆ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಸಾಕಷ್ಟು ಕುತೂಹಲವನ್ನು ಈ ಟೀಸರ್ ಹುಟ್ಟುಹಾಕಿದೆ. ಸಂದೇಶ್ ಶೆಟ್ಟಿ ಆಜ್ರಿ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಉತ್ತರ ಕರ್ನಾಟಕದ ಇನಾಮ್ದಾರ್ ವಂಶದ ಗಟ್ಟಿಗಿತ್ತಿ ಹೆಣ್ಣು ಮಗಳು ಚಿತ್ರದೇವಿಯ ಪಾತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಚಿತ್ರಕಲಾ ರಾಜೇಶ್ ಕಾಣಿಸಿಕೊಳ್ಳಲಿದ್ದಾರೆ.
ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಳ್ಳುವ ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ, ‘ಇದು ಉತ್ತರ ಕರ್ನಾಟಕ ಮೂಲದ ಶಿವಾಜಿ ಮಹಾರಾಜರನ್ನು ಆರಾಧಿಸುವ ‘ಇನಾಮ್ದಾರ್’ ಕುಟುಂಬ ಹಾಗೂ ದಕ್ಷಿಣದ ಕರಾವಳಿ ಭಾಗದ ಕಾಡಿನಲ್ಲಿ ವಾಸಿಸುವ ಹಾಗೂ ಶಿವನ ಆರಾಧಕರಾದ ಕಾಡು ಜನರ ನಡುವೆ ನಡೆಯುವ ವರ್ಣಸಂಘರ್ಷದ ಕಥೆಯಾಗಿದೆ. ‘ಇನಾಮ್ದಾರ್’ ಚಿತ್ರಕ್ಕೆ ‘ಕಪ್ಪು ಸುಂದರಿಯ ಸುತ್ತ’ ಎಂಬ ಅಡಿಬರಹವಿದೆ. ಈಗಾಗಲೇ ಚಿತ್ರೀಕರಣ ಮುಕ್ತಾಯ ಆಗಿದೆ. ಬೆಳಗಾವಿ, ಕುಂದಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಡಬ್ಬಿಂಗ್ ಸಹ ಪೂರ್ಣವಾಗಿದೆ. ಚಿತ್ರ ಹೇಗೆ ಬಂದಿದೆ ಎಂದು ಟೀಸರ್ ಮೂಲಕ ತೋರಿಸುವ ಸಣ್ಣ ಪ್ರಯತ್ನ ಮಾಡಿದ್ದೇವೆ. ನನ್ನ ಕನಸಿಗೆ ಸಹಕಾರ ನೀಡಿದ ನಿರ್ಮಾಪಕರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದಗಳು’ ಎಂದು ಹೇಳುತ್ತಾರೆ. ನಿರ್ದೇಶನದ ಜೊತೆಗೆ ಸಂದೇಶ್ ಶೆಟ್ಟಿ ಆಜ್ರಿ ಅವರು ಈ ಸಿನಿಮಾದಲ್ಲೊಂದು ಪ್ರಮುಖ ಪಾತ್ರಕ್ಕೂ ಬಣ್ಣ ಹಚ್ಚಿದ್ದಾರೆ.
ಚಿತ್ರಕ್ಕೆ ನಿರಂಜನ್ ಶೆಟ್ಟಿ ತಲ್ಲೂರು ಅವರು ಹಣ ಹಾಕಿದ್ದಾರೆ. ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, ‘ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಅವರು ನನ್ನ ಆತ್ಮೀಯ ಸ್ನೇಹಿತ. ಈ ಚಿತ್ರದ ಟೀಸರ್ ನೋಡಿ ನನಗಂತೂ ತುಂಬ ಖುಷಿಯಾಗಿದೆ. ಈ ಸಿನಿಮಾ ಕೂಡ ಚೆನ್ನಾಗಿ ಬಂದಿರುತ್ತದೆ ಎಂಬ ಭರವಸೆ ಮೂಡಿದೆ’ ಎಂದರು. ಈ ಚಿತ್ರದಲ್ಲಿ ನಾಯಕಿಯರಾಗಿ ಚಿರಶ್ರೀ ಅಂಚನ್ ಮತ್ತು ಎಸ್ತರ್ ನರೋನ್ಹಾ ನಟಿಸಿದ್ದಾರೆ.
ಮುಖ್ಯ ಭೂಮಿಕೆಯಲ್ಲಿ ಹಿರಿಯ ನಾಟರಾದ ಅವಿನಾಶ್, ಶರತ್ ಲೋಹಿತಾಶ್ವ, ಥ್ರಿಲ್ಲರ್ ಮಂಜು, ಪ್ರಮೋದ್ ಶೆಟ್ಟಿ, ಎಂ.ಕೆ.ಮಠ, ರಘು ಪಾಂಡೇಶ್ವರ, ಯಶ್ ಆಚಾರ್, ಕರುಣಾಕರ್ ಕುಂದರ್, ಚಿತ್ರಕಲಾ ರಾಜೇಶ್ ಮುಂತಾದವರು ನಟಿಸಿದ್ದಾರೆ. ಹಾಡುಗಳಿಗೆ ರಾಕಿ ಸೋನು ಸಂಗೀತ ನೀಡಿದ್ದಾರೆ. ಮುರಳಿ ಅವರು ಛಾಯಾಗ್ರಹಣ ಮಾಡಿದ್ದು, ಸಂಕಲನಕಾರರಾಗಿ ಶಿವರಾಜ್ ಮೇಹು ಅವರು ಕೆಲಸ ಮಾಡಿದ್ದಾರೆ. ಗೀತಾ ಸಾಯಿ ಅವರ ನೃತ್ಯ ನಿರ್ದೇಶನ ಈ ಸಿನಿಮಾಕ್ಕಿದೆ.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…