Advertisement
ಸುದ್ದಿಗಳು

ವಿಭಿನ್ನ ಕಥೆಯ ಚಿತ್ರ ‘ಇನಾಮ್ದಾರ್’ | ವರ್ಣ‌ಸಂಘರ್ಷದ ಕಥೆ ಇದು | ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ |

Share

ಕನ್ನಡ ಚಿತ್ರರಂಗಕ್ಕೀಗ ಸುವರ್ಣ ಕಾಲ ಎನ್ನಬಹುದು. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ಚಿತ್ರರಸಿಕರು ಒಪ್ಪಿಕೊಂಡು, ಯಶಸ್ವಿಗೊಳಿಸಿದ್ದಾರೆ‌. ಅಂತಹುದೇ ವಿಭಿನ್ನ ಕಥೆಯ ಚಿತ್ರ ‘ಇನಾಮ್ದಾರ್’. ಈಚೆಗೆ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಸಾಕಷ್ಟು ಕುತೂಹಲವನ್ನು ಈ ಟೀಸರ್ ಹುಟ್ಟುಹಾಕಿದೆ. ಸಂದೇಶ್ ಶೆಟ್ಟಿ ಆಜ್ರಿ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಉತ್ತರ ಕರ್ನಾಟಕದ ಇನಾಮ್ದಾರ್ ವಂಶದ ಗಟ್ಟಿಗಿತ್ತಿ ಹೆಣ್ಣು ಮಗಳು  ಚಿತ್ರದೇವಿಯ ಪಾತ್ರದಲ್ಲಿ  ದಕ್ಷಿಣ ಕನ್ನಡ ಜಿಲ್ಲೆಯ ಚಿತ್ರಕಲಾ ರಾಜೇಶ್ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಳ್ಳುವ ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ, ‘ಇದು ಉತ್ತರ ಕರ್ನಾಟಕ ಮೂಲದ ಶಿವಾಜಿ ಮಹಾರಾಜರನ್ನು ಆರಾಧಿಸುವ ‘ಇನಾಮ್ದಾರ್’ ಕುಟುಂಬ ಹಾಗೂ ದಕ್ಷಿಣದ ಕರಾವಳಿ ಭಾಗದ ಕಾಡಿನಲ್ಲಿ ವಾಸಿಸುವ ಹಾಗೂ ಶಿವನ ಆರಾಧಕರಾದ ಕಾಡು ಜನರ ನಡುವೆ ನಡೆಯುವ ವರ್ಣ‌ಸಂಘರ್ಷದ ಕಥೆಯಾಗಿದೆ. ‘ಇನಾಮ್ದಾರ್’ ಚಿತ್ರಕ್ಕೆ ‘ಕಪ್ಪು ಸುಂದರಿಯ ಸುತ್ತ’ ಎಂಬ ಅಡಿಬರಹವಿದೆ. ಈಗಾಗಲೇ ಚಿತ್ರೀಕರಣ ಮುಕ್ತಾಯ ಆಗಿದೆ. ಬೆಳಗಾವಿ, ಕುಂದಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.‌ ಡಬ್ಬಿಂಗ್ ಸಹ ಪೂರ್ಣವಾಗಿದೆ. ಚಿತ್ರ ಹೇಗೆ ಬಂದಿದೆ ಎಂದು ಟೀಸರ್ ಮೂಲಕ ತೋರಿಸುವ ಸಣ್ಣ ಪ್ರಯತ್ನ ಮಾಡಿದ್ದೇವೆ. ನನ್ನ ಕನಸಿಗೆ ಸಹಕಾರ ನೀಡಿದ ನಿರ್ಮಾಪಕರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದಗಳು’ ಎಂದು ಹೇಳುತ್ತಾರೆ. ನಿರ್ದೇಶನದ ಜೊತೆಗೆ ಸಂದೇಶ್ ಶೆಟ್ಟಿ ಆಜ್ರಿ ಅವರು ಈ ಸಿನಿಮಾದಲ್ಲೊಂದು ಪ್ರಮುಖ ಪಾತ್ರಕ್ಕೂ ಬಣ್ಣ ಹಚ್ಚಿದ್ದಾರೆ.

ಚಿತ್ರಕ್ಕೆ ನಿರಂಜನ್ ಶೆಟ್ಟಿ ತಲ್ಲೂರು ಅವರು ಹಣ ಹಾಕಿದ್ದಾರೆ. ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, ‘ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಅವರು ನನ್ನ ಆತ್ಮೀಯ ಸ್ನೇಹಿತ. ಈ ಚಿತ್ರದ ಟೀಸರ್ ನೋಡಿ ನನಗಂತೂ ತುಂಬ ಖುಷಿಯಾಗಿದೆ. ಈ ಸಿನಿಮಾ ಕೂಡ ಚೆನ್ನಾಗಿ ಬಂದಿರುತ್ತದೆ ಎಂಬ ಭರವಸೆ ಮೂಡಿದೆ’ ಎಂದರು. ಈ ಚಿತ್ರದಲ್ಲಿ ನಾಯಕಿಯರಾಗಿ ಚಿರಶ್ರೀ ಅಂಚನ್ ಮತ್ತು ಎಸ್ತರ್ ನರೋನ್ಹಾ ನಟಿಸಿದ್ದಾರೆ.

ಮುಖ್ಯ ಭೂಮಿಕೆಯಲ್ಲಿ ಹಿರಿಯ ನಾಟರಾದ ಅವಿನಾಶ್, ಶರತ್ ಲೋಹಿತಾಶ್ವ, ಥ್ರಿಲ್ಲರ್ ಮಂಜು, ಪ್ರಮೋದ್ ಶೆಟ್ಟಿ, ಎಂ.ಕೆ.ಮಠ,‌ ರಘು ಪಾಂಡೇಶ್ವರ, ಯಶ್ ಆಚಾರ್, ಕರುಣಾಕರ್ ಕುಂದರ್, ಚಿತ್ರಕಲಾ ರಾಜೇಶ್ ಮುಂತಾದವರು ನಟಿಸಿದ್ದಾರೆ. ಹಾಡುಗಳಿಗೆ ರಾಕಿ ಸೋನು ಸಂಗೀತ ನೀಡಿದ್ದಾರೆ. ಮುರಳಿ ಅವರು ಛಾಯಾಗ್ರಹಣ ಮಾಡಿದ್ದು, ಸಂಕಲನಕಾರರಾಗಿ ಶಿವರಾಜ್ ‌ಮೇಹು ಅವರು ಕೆಲಸ ಮಾಡಿದ್ದಾರೆ. ಗೀತಾ ಸಾಯಿ ಅವರ ನೃತ್ಯ ನಿರ್ದೇಶನ ಈ ಸಿನಿಮಾಕ್ಕಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

11 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago