MIRROR FOCUS

ದೇಶಸೇವೆ ಮಾಡಲಿಚ್ಚಿಸುವ ಯುವಕ ಯುವತಿಯರಿಗೆ ಸುವರ್ಣಾವಕಾಶ | ಅಗ್ನಿವೀರ್ ನೇಮಕಾತಿ ರ‍್ಯಾಲಿಗಾಗಿ ಅರ್ಜಿ ಆಹ್ವಾನ | 30 ಸಾವಿರ ಸಂಬಳದ ಜೊತೆಗೆ ಆಕರ್ಷಕ ಭತ್ಯೆ

Share

ದೇಶ ಸೇವೆ(serving Country) ಮಾಡಬೇಕು ಎನ್ನುವ ದೇಶದ ಪ್ರತಿಯೊಬ್ಬ ಯುವಕ, ಯುವತಿಯರಿಗೆ(Youths) ಇಲ್ಲಿದೆ ಸುವರ್ಣವಕಾಶ. ಅಗ್ನಿವೀರ್ ನೇಮಕಾತಿ ರ‍್ಯಾಲಿಗಾಗಿ(Agniveer Exam) ಅರ್ಜಿಸಲ್ಲಿಸಬಹುದು. ಫೆಬ್ರವರಿ 13 ರಂದು ಪ್ರಾರಂಭವಾದ ಅಗ್ನಿವೀರ್ ನೇಮಕಾತಿ ರ‍್ಯಾಲಿಗಾಗಿ (2024-25) ಸಾಮಾನ್ಯ ಪ್ರವೇಶ ಪರೀಕ್ಷೆಗೆ (CEE) ಆನ್‌ಲೈನ್ ನೋಂದಣಿಯನ್ನು ಮಾರ್ಚ್ 22 ರವರೆಗೆ (Agniveer Exam Online Registration Date) ವಿಸ್ತರಿಸಲಾಗಿದೆ. ಪ್ರತಿ ವರ್ಗದ ವಯಸ್ಸು, ಶೈಕ್ಷಣಿಕ ಅರ್ಹತೆಗಳು ಮತ್ತು ಇತರ ಮಾನದಂಡಗಳ ವಿವರವಾದ ಮಾಹಿತಿಯು ಭಾರತೀಯ ಸೇನೆಯ(Indian Army) ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ಅಧಿಸೂಚನೆಯಲ್ಲಿ ಲಭ್ಯವಿದೆ.

Advertisement

ಭಾರತೀಯ ಸೇನೆಯು ಅಗ್ನಿವೀರ್ ನೇಮಕಾತಿ ರ‍್ಯಾಲಿಗಾಗಿ ನೋಂದಣಿಗೆ ಅವಕಾಶ ನೀಡಿದ್ದು, ಸರಿಸುಮಾರು 25,000 ಹುದ್ದೆಗಳನ್ನು ಭರ್ತಿ ಮಾಡಲು ಆರಂಭಿಸಿದೆ. ಅಗ್ನಿವೀರ್ ಹುದ್ದೆಗೆ ಮಾಸಿಕ ವೇತನ ರೂ. 30,000 ದೊರೆಯಲಿದ್ದು, ಜೊತೆಗೆ ಹೆಚ್ಚುವರಿ ಭತ್ಯೆಗಳು ಸಹ ಆಯ್ಕೆಯಾದ ಅಭ್ಯರ್ಥಿಗಳಿಗೆ ದೊರೆಯಲಿದೆ. 17 ರಿಂದ 21 ವರ್ಷದೊಳಗಿನ ಆಸಕ್ತ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದು. ಅಧಿಕೃತ ಜಾಲತಾಣದ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅಗ್ನಿಪಥ್ ಯೋಜನೆ ಎಂದರೇನು? : ಸಶಸ್ತ್ರ ಪಡೆಗಳಿಗೆ ಯುವಜನರನ್ನು ನೇಮಕಾತಿ ಮಾಡಿಕೊಳ್ಳುವ ಸರ್ಕಾರದ ಹೊಸ ಯೋಜನೆಗೆ ಅಗ್ನಿಪಥ್ ಎನ್ನಲಾಗುತ್ತದೆ. ಇದರ ಮೂಲಕ ಸೇನೆಗೆ ಆಯ್ಕೆಯಾಗುವವರನ್ನು ‘ಅಗ್ನಿವೀರರು’ ಎಂದು ಕರೆಯಲಾಗುತ್ತದೆ. ಸಶಸ್ತ್ರ ಪಡೆಗಳಿಗೆ ಅಲ್ಪಾವಧಿಯ ಅಗ್ನಿಪಥ್ ನೇಮಕಾತಿ ಯೋಜನೆಯ ಮೇಲಿನ ಆತಂಕಗಳನ್ನು ನಿವಾರಿಸಲು ಸರ್ಕಾರವು ಈ ವರ್ಷ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ಘೋಷಿಸಿ, ವಯಸ್ಸಿನ ಮಿತಿಯನ್ನು 21 ರಿಂದ 23 ವರ್ಷಗಳಿಗೆ ಹೆಚ್ಚಿಸಿತು.

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPFs) ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ‘ಅಗ್ನಿವೀರ್’ಗಳಿಗೆ 10 ಪ್ರತಿಶತ ಮೀಸಲಾತಿಯನ್ನು ನೀಡಿ ಕೇಂದ್ರ ಸರ್ಕಾರ ಇಂದು ಪ್ರಕಟಿಸಿದೆ. ಎರಡು ಅರೆಸೇನಾ ಪಡೆಗಳಲ್ಲಿ ನೇಮಕಾತಿಗಾಗಿ ಅಗ್ನಿವೀರ್‌ಗಳಿಗೆ ನಿಗದಿತ ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ಗೃಹ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ.

ನೇಮಕಾತಿಯಲ್ಲಿ ವಯಸ್ಸಿನ ಮಿತಿ ಸಡಿಲಿಕೆ : ಅಗ್ನಿವೀರ್‌ ಮೊದಲ ಬ್ಯಾಚ್ ನಿಗದಿತ ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ ಐದು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ಈಗಾಗಲೇ ಕೇಂದ್ರ ಸರ್ಕಾರ ಘೋಷಿಸಿದೆ. ಹೊಸ ಸೇನಾ ನೇಮಕಾತಿ ಯೋಜನೆಯ ವಯೋಮಿತಿಯನ್ನು 21 ವರ್ಷಗಳಿಂದ 23 ವರ್ಷಗಳಿಗೆ ಏರಿಕೆ ಮಾಡಿ ಒಂದು ಬಾರಿ ಬದಲಾವಣೆಯನ್ನು ಕೇಂದ್ರ ಸರ್ಕಾರವು ಈಗಾಗಲೇ ಘೋಷಿಸಿದೆ . ಕಳೆದ ಎರಡು ವರ್ಷಗಳಿಂದ ಯಾವುದೇ ನೇಮಕಾತಿ ನಡೆಯದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಅಗ್ನಿವೀರರಿಗೆ ರೈಲ್ವೆ ನೇಮಕಾತಿಯಲ್ಲಿ ಮೀಸಲಾತಿ ನೀಡಲಾಗುವುದು ಎಂದು ಘೋಷಿಸಲಾಗಿದೆ. ಸೇನೆಯ ಅಗ್ನಿಪಥ್ ಯೋಜನೆಯಡಿ ನಿವೃತ್ತರಾಗುವ ಅಗ್ನಿವೀರರಿಗೆ ರೈಲ್ವೆ ತನ್ನ ವಿವಿಧ ಇಲಾಖೆಗಳ ಅಡಿಯಲ್ಲಿ ನಾನ್ ಗೆಜೆಟೆಡ್ ಹುದ್ದೆಗಳ ನೇರ ನೇಮಕಾತಿಯಲ್ಲಿ ಶೇಕಡಾ 15 ರಷ್ಟು ಮೀಸಲಾತಿ ನೀಡಲು ನಿರ್ಧರಿಸಿದೆ. ಆರಂಭದಲ್ಲಿ ಸಾಕಷ್ಟು ವಿರೋಧಗಳನ್ನು ಎದುರಿಸಿದ್ದ ಅಗ್ನಿಪಥ್ ಯೋಜನೆಯನ್ನು ಮತ್ತಷ್ಟು ಉತ್ತೇಜಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಭದ್ರತಾ ಪಡೆ (BSF) ಯಲ್ಲಿ ಶೇಕಡಾ 10 ರಷ್ಟು ಮೀಸಲಾತಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ಗೃಹ ಸಚಿವಾಲಯ ಈ ಆದೇಶವನ್ನು ಹೊರಡಿಸಿದೆ.

– ಅಂತರ್ಜಾಲ ಮಾಹಿತಿ

Online registration for Common Entrance Examination (CEE) for Agniveer Recruitment Rally (2024-25) which started on February 13 has been extended till March 22 (Agniveer Exam Online Registration Date). The detailed information about age, educational qualifications and other criteria for each category is available in the notification uploaded on the Indian Army website.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಂಗಳೂರು ಫ್ರೆಶ್ ಥಾನ್ ಓಟ | ಕ್ಯಾನ್ಸರ್ ಮುಕ್ತ ಜಗತ್ತನ್ನು ಉತ್ತೇಜಿಸುವ ಕಾರ್ಯಕ್ರಮ |

ಕ್ಯಾನ್ಸರ್ ಮುಕ್ತ ಜಗತ್ತನ್ನು ಉತ್ತೇಜಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಬೆಂಗಳೂರು ಫ್ರೆಶ್ ಥಾನ್ ಓಟ…

3 hours ago

ಬೇಸಿಗೆ ಹಿನ್ನೆಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆ | ದ ಕ ಜಿಲ್ಲೆಯ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಕುರಿತು ಚರ್ಚೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಹಾಗೂ ಮಳೆಗಾಲವನ್ನು ಎದುರಿಸಲು…

3 hours ago

ರಾಜ್ಯದಲ್ಲಿ ಹೊಸದಾಗಿ 2 ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದೆ | ಸಚಿವ ರಾಮಲಿಂಗಾರೆಡ್ಡಿ

ರಾಜ್ಯದಲ್ಲಿ ಜನರ ಅನುಕೂಲಕ್ಕಾಗಿ ಎರಡು ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದೆ ಎಂದು ಸಾರಿಗೆ  ಸಚಿವ…

4 hours ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ |

ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ…

4 hours ago

ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ | ಆಧುನಿಕ ತಂತ್ರಜ್ಞಾನಕ್ಕೆ ಸಾಕ್ಷಿಯಾಗಿರುವ ಪಂಬನ್‌ ಸೇತುವೆ |

ದಕ್ಷಿಣ ರೈಲ್ವೆಯು ರೈಲು ವಿಕಾಸ ನಿಗಮ ಸಹಯೋಗದೊಂದಿಗೆ 531 ಕೋಟಿ ರೂಪಾಯಿ ವೆಚ್ಚದಲ್ಲಿ…

4 hours ago

ಅಡುಗೆ ಗ್ಯಾಸ್ ಬೆಲೆ‌ ಸಿಲಿಂಡರ್‌ಗೆ 50 ರೂ. ಹೆಚ್ಚಳ

ಅಡುಗೆ ಅನಿಲ ಅಥವಾ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50…

7 hours ago