Advertisement
MIRROR FOCUS

ಎರೆಹುಳು ಗೊಬ್ಬರ ತಯಾರಿಸುತ್ತಿರುವ ಈ ರೈತ ಮಾದರಿಯಾದ್ದು ಏಕೆ..?

Share

ಎಲ್ಲರೂ ಕೃಷಿ ಮಾಡುತ್ತಾರೆ. ಗೊಬ್ಬರ ತಯಾರಿಸುತ್ತಾರೆ. ಆದರೆ ಇಲ್ಲೊಬ್ಬ ರೈತ ಎರೆಹುಳ ಗೊಬ್ಬರ ತಯಾರಿಸಿ ಗಮನ ಸೆಳೆದಿದ್ದಾರೆ. ಮನಸ್ಸಿದ್ದರೆ ಮಾರ್ಗವೂ ಇದೆ ಎನ್ನುವುದನ್ನು ಅವರು ತೋರಿಸಿದ್ದಾರೆ. 

ಮಣ್ಣಿನ ಫಲವತ್ತತೆ ಹೆಚ್ಚಿಸುವ ಉದ್ದೇಶದಿಂದ ಮಂಡ್ಯದ ರೈತ ಎರೆಹುಳು ಗೊಬ್ಬರ ತಯಾರಿಸಿ ಇತರರಿಗೂ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದಾರೆ. ಇದರ ಜೊತೆಗೆ ಪ್ರಧಾನಮಂತ್ರಿ ಮತ್ಸಯೋಜನೆಯ ಲಾಭ ಪಡೆದು ಉತ್ತಮ ಆದಾಯ ಗಳಿಸುವ ಮೂಲಕ ಮಾದರಿಯಾಗಿದ್ದಾರೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ದೊಡ್ಡಬಾಲ ಗ್ರಾಮದ ನರಸಿಂಹಮೂರ್ತಿ ಎಂಬ ರೈತ ತಮ್ಮ ತೋಟದಲ್ಲಿ ಬರುವ ಕೃಷಿ ತ್ಯಾಜ್ಯದ ಜೊತೆಗೆ ಇತರೆ ರೈತರ ಜಮೀನುಗಳಿಂದ ಕೃಷಿ ತ್ಯಾಜ್ಯ ಸಂಗ್ರಹಿಸಿ ತಮ್ಮ ಎರೆಹುಳು ಘಟಕದಲ್ಲಿ ಫಲವತ್ತಾದ ಗೊಬ್ಬರವನ್ನು ತಯಾರಿಸಿ ತಮ್ಮ ಹೊಲಕ್ಕೆ ಬಳಕೆ ಮಾಡುತ್ತಾರೆ. ಅಲ್ಲದೆ ಇತರೆ ರೈತರಿಗೂ ಎರೆಹುಳು ಗೊಬ್ಬರವನ್ನು ಮಾರಾಟ ಮಾಡುತ್ತಿದ್ದು ರಾಸಾಯನಿಕ ಮುಕ್ತ ಬೆಳೆಗಳನ್ನು ಬೆಳೆಯಲು ಸಹಕಾರಿಯಾಗಿದ್ದಾರೆ.

 

ಅಲ್ಲದೆ ಪ್ರಧಾನಮಂತ್ರಿ ಮತ್ಸ್ಯಯೋಜನೆಯಡಿ ಹಣಕಾಸು ಸಹಾಯ ಪಡೆದು 8 ತೊಂಬೆಗಳಲ್ಲಿ ಮೀನು ಸಾಕಾಣಿಕೆ ಮಾಡುತ್ತಿದ್ದಾರೆ. ಈ ಮೀನುಗಳಿಗೆ ಉತ್ತಮ ಬೇಡಿಕೆ ಇದ್ದು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಮೂಲಕ ಉತ್ತಮ ಲಾಭ ಗಳಿಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಕೃಷಿಕ ನರಸಿಂಹಮೂರ್ತಿ, ರಾಸಾಯನಿಕ ಗೊಬ್ಬರ ಬಳಕೆ ಮಾಡಿ ಬೆಳೆದ ಆಹಾರವನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಅಲ್ಲದೆ ಮಣ್ಣಿನ ಫಲವತ್ತತೆಯೂ ನಾಶವಾಗುತ್ತದೆ. ಇದನ್ನು ತಡೆಗಟ್ಟುವ ಉದ್ದೇಶದಿಂದ ಎರೆಹುಳು ಗೊಬ್ಬರ ತಯಾರಿಸಲಾಗುತ್ತಿದೆ. ಮತ್ಸ್ಯಯೋಜನೆಯೂ ಹೆಚ್ಚು ಲಾಭದಾಯಕವಾಗಿದೆ ಎನ್ನುತ್ತಾರೆ.

ಈ ರೈತರ ಎರೆಗೊಬ್ಬರದ  ಗ್ರಾಹಕ ಪುಟ್ಟಸ್ವಾಮಿ ಅವರ ಪ್ರಕಾರ, ಎರೆಹುಳು ಗೊಬ್ಬರ ಖರೀದಿಸಿ ತಮ್ಮ ಜಮೀನುಗಳಿಗೆ ಬಳಕೆ ಮಾಡಲಾಗುತ್ತಿದ್ದು, ಫಲವತ್ತಾದ ಬೆಳೆ ಬೆಳೆಯಲು ಸಹಕಾರಿಯಾಗಿದೆ ಎನ್ನುತ್ತಾರೆ.

ಬಿಂಡಿಗನವಿಲೆ ರೈತ ಸಂಪರ್ಕ ಕೇಂದ್ರದ ಅಧಿಕಾರಿ ರಂಗಸ್ವಾಮಿ , ರೈತರಿಗೆ ಕಡಿಮೆ ಬೆಲೆಯಲ್ಲಿ ಎರೆಹುಳು ಗೊಬ್ಬರ ಮಾರಾಟ ಮಾಡುವ ಮೂಲಕ ಸಾವಯವ ಕೃಷಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದರು.

ಒಟ್ಟಾರೆ ರೈತರು ರಾಸಾಯನಿಕ ಗೊಬ್ಬರ ಮತ್ತು ಔಷಧಿಗಳ ಕಡೆ ಮುಖಮಾಡುತ್ತಿರುವ ಕಾಲಮಾನದಲ್ಲಿ ನರಸಿಂಹಮೂರ್ತಿ ಅವರ ಸಾವಯವ ಕೃಷಿ ಅಳವಡಿಕೊಳ್ಳುವ ಮೂಲಕ ಉತ್ತಮ ಆದಾಯ ಪಡೆಯುತ್ತಿದ್ದು ಇತರರಿಗೂ ಮಾದರಿಯಾಗಿದ್ದಾರೆ.

Narasimhamurthy, a farmer from Doddabala village in Nagamangala taluk of Mandya district, collects agricultural waste from both his own garden and other farmers’ fields to create fertile manure in his earthworm unit. He uses this manure in his own fields and also sells earthworm fertilizer to other farmers, helping them grow chemical-free crops.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

2 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

2 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

13 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

19 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

19 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

19 hours ago