Opinion

#ScrubTyphus | ಭಾರತದಲ್ಲಿ ಹರಡುತ್ತಿದೆ ಸ್ಕ್ರಬ್ ಟೈಫಸ್ ಸೋಂಕು | 5 ಜನರನ್ನು ಬಲಿ ಪಡೆದ ರೋಗ |

Share

ಮಳೆಗಾಲ ಆರಂಭವಾಗುತ್ತಿದ್ದಂತೆ ಸಾಂಕ್ರಾಮಿಕ ರೋಗಗಳು ಹರಡುವುದು ಸಾಮಾನ್ಯ. ಮಳೆಗಾಲದಲ್ಲಿ ಬ್ಯಾಕ್ಟೀರಿಯಾ ಸೋಂಕುಗಳು ಮತ್ತು ನೀರಿನಿಂದ ಹರಡುವ ರೋಗಗಳು ಹೆಚ್ಚಾಗಿರುತ್ತದೆ. ಇದೀಗ ಭಾರತದಲ್ಲಿ ಸ್ಕ್ರಬ್ ಟೈಫಸ್ ಎಂಬ ಹೊಸ ಬ್ಯಾಕ್ಟೀರಿಯಾ ಸೋಂಕೊಂದು ವೇಗವಾಗಿ ಹರಡುತ್ತಿದೆ. ಇತ್ತೀಚೆಗೆ, ಸ್ಕ್ರಬ್ ಟೈಫಸ್ #scrubtyphus ಎಂಬ ಬ್ಯಾಕ್ಟೀರಿಯಾದ ಸೋಂಕು ರಾಜಸ್ಥಾನ, ತಮಿಳುನಾಡು ಮತ್ತು ಹಿಮಾಚಲ ಪ್ರದೇಶದಲ್ಲಿ ಕಾಣಿಸಿಕೊಂಡಿದೆ. ಈ 2 ರಾಜ್ಯಗಳ 700ಕ್ಕೂ ಹೆಚ್ಚು ಜನರಿಗೆ ಸ್ಕ್ರಬ್ ಟೈಫಸ್ ಕಾಣಿಸಿಕೊಂಡಿದೆ. 5 ಜನರು ಈ ಹೊಸ ರೋಗದಿಂದ ಸಾವನ್ನಪ್ಪಿದ್ದಾರೆ.

ಏನಿದು ಸ್ಕ್ರಬ್ ಟೈಫಸ್?: ಗುರುಗ್ರಾಮ್‌ನ ಫೋರ್ಟಿಸ್ ಮೆಮೋರಿಯಲ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನ ಸಾಂಕ್ರಾಮಿಕ ರೋಗ ಸಲಹೆಗಾರರಾದ ಡಾ.ನೇಹಾ ರಸ್ತೋಗಿ ಅವರ ಪ್ರಕಾರ, ಸ್ಕ್ರಬ್ ಟೈಫಸ್ ಒಂದು  ಸಾಂಕ್ರಾಮಿಕ ರೋಗವಾಗಿದ್ದು, ‘ಓರಿಯೆಂಟಿಯಾ ಸುತ್ಸುಗಮುಶಿ’ ಎಂಬ ಬ್ಯಾಕ್ಟೀರಿಯಂನಿಂದ ಉಂಟಾಗುವ ಬ್ಯಾಕ್ಟೀರಿಯಾದ ಸೋಂಕು. ಇದು ಸೋಂಕಿತ ಸಣ್ಣ ಹುಳಗಳ ಕಚ್ಚುವಿಕೆಯ ಮೂಲಕ ಹರಡುತ್ತದೆ. ಇದರ ಸಾಮಾನ್ಯ ರೋಗಲಕ್ಷಣಗಳೆಂದರೆ ಜ್ವರ, ತಲೆನೋವು, ಸ್ನಾಯು ನೋವು ಮತ್ತು ಕೆಂಪನೆಯ ಕಜ್ಜಿಗಳು. ಭಾರೀ ಸಸ್ಯವರ್ಗವಿರುವ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಭಾರತ ಸೇರಿದಂತೆ ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ಕಂಡುಬರುತ್ತದೆ ಮತ್ತು ಮಳೆಯ ಸಮಯದಲ್ಲಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಹೆಚ್ಚು ಕಂಡುಬರುತ್ತದೆ.

ಸ್ಕ್ರಬ್ ಟೈಫಸ್​ನ ರೋಗಲಕ್ಷಣಗಳು ಯಾವುವು?: ಸ್ಕ್ರಬ್ ಟೈಫಸ್‌ನ ಲಕ್ಷಣಗಳು ಸಾಮಾನ್ಯವಾಗಿ ಹುಳ ವ್ಯಕ್ತಿಯನ್ನು ಕಚ್ಚಿದ 10 ದಿನಗಳಲ್ಲಿ ಕಾಣಿಸಿಕೊಳ್ಳುತ್ತವೆ. ಚಳಿ ಹಾಗೂ ಜ್ವರ, ತಲೆನೋವು, ಸ್ನಾಯು ನೋವು ಮತ್ತು ಹುಳ ಕಚ್ಚಿದ ಜಾಗದ ಸುತ್ತ ಕೆಂಪನೆಯ ರಿಂಗ್ ಮೂಡುವುದು ಈ ರೋಗದ ಪ್ರಮುಖ ಲಕ್ಷಣಗಳು. ಈ ಸ್ಕ್ರಬ್ ಟೈಫಸ್‌ ಸೋಂಕು ತೀವ್ರವಾದರೆ ರಕ್ತಸ್ರಾವ ಮತ್ತು ಅಂಗಾಂಗ ವೈಫಲ್ಯಕ್ಕೆ ಕಾರಣವಾಗಬಹುದು. ರೋಗಿ ಕೋಮಾಕ್ಕೂ ಹೋಗಬಹುದು. ತಕ್ಷಣವೇ ಚಿಕಿತ್ಸೆ ನೀಡದಿದ್ದರೆ ಈ ರೋಗ ಮಾರಣಾಂತಿಕವೂ ಆಗಬಹುದು.

ಇದನ್ನು ತಡೆಗಟ್ಟುವುದು ಹೇಗೆ?: ಸ್ಕ್ರಬ್ ಟೈಫಸ್ ಅನ್ನು ತಡೆಗಟ್ಟಲು ಪ್ರಸ್ತುತ ಯಾವುದೇ ಲಸಿಕೆ ಇಲ್ಲ. ಆದರೆ ಸೋಂಕಿತ ಹುಳಗಳ ಸಂಪರ್ಕವನ್ನು ತಪ್ಪಿಸುವ ಮೂಲಕ ನಿಮ್ಮ ಅಪಾಯವನ್ನು ಕಡಿಮೆ ಮಾಡಬಹುದು. ಈ ರೋಗ ಹೆಚ್ಚಾಗಿರುವ ಪ್ರದೇಶಗಳಿಗೆ ಕೆಲ ಕಾಲ ಪ್ರಯಾಣವನ್ನು ಮಾಡಬೇಡಿ. ಹುಳಗಳು ಸಾಮಾನ್ಯವಾಗಿ ಕಂಡುಬರುವ ದಟ್ಟವಾದ ಗಿಡ-ಮರಗಳಿರುವ ಸ್ಥಳಗಳಿಂದ ದೂರವಿರಿ. ಶಿಶುಗಳು ಮತ್ತು ಚಿಕ್ಕ ಮಕ್ಕಳನ್ನು ಹೊರಗೆ ಕರೆದುಕೊಂಡು ಹೋಗುವಾಗ ಅವರ ಕೈ ಮತ್ತು ಕಾಲುಗಳನ್ನು ಮುಚ್ಚಬೇಕು. ಆದಷ್ಟೂ ಕಾಡಿನ ಪ್ರದೇಶದಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗದಿರುವುದು ಉತ್ತಮ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ

ಗುಜ್ಜೆ ಶೇಂಗಾ ಪಲ್ಯ ಮಾಡುವ ವಿಧಾನ...

14 hours ago

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

21 hours ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

21 hours ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

22 hours ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

2 days ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

2 days ago