ಸಹ್ಯಾದ್ರಿ ತಪ್ಪಲಿಂದ ಇನ್ನು ಆಕಾಶಕ್ಕೆ ಹಾರಲಿದೆ ವಿಮಾನ | ಶಿವಮೊಗ್ಗದಲ್ಲಿ ಪ್ರಧಾನಿ ಮೋದಿಯಿಂದ ನೂತನ ವಿಮಾನ ನಿಲ್ದಾಣ ಉದ್ಘಾಟನೆ |

February 27, 2023
4:34 PM

ಹಲವು ವರ್ಷಗಳ ಶಿವಮೊಗ್ಗ ಜನತೆಯ ಕನಸು, ಇಂದು ಸಾಕಾರಗೊಂಡಿತು. ಶಿವಮೊಗ್ಗಕ್ಕೆ ಇಂದು ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸೋಗಾನೆಯಲ್ಲಿ ರೂ.450 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದರು.

Advertisement

ನವದದೆಹಲಿಯಿಂದ ಸೇನಾ ವಿಮಾನದಲ್ಲಿ ಬಂದ ಮೋದಿಯವರು ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ನೇರವಾಗಿ ಬಂದಿಳಿದರು. ಈ ವೇಳೆ ಪ್ರಧಾನಿ ಮೋದಿಗೆ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ನಾರಾಯಣಗೌಡ, ಭೈರತಿ ಬಸವರಾಜ್​, ಶಾಸಕ ಸಿ.ಟಿ.ರವಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್​ ಸೇರಿ ಹಲವರು ಸ್ವಾಗತ ಕೋರಿದರು.

ಬಳಿಕ ವಿಮಾನ ನಿಲ್ದಾಣವನ್ನು ಮೋದಿಯವರು ಉದ್ಘಾಟನೆ ಮಾಡಿ, ಸಮಾರಂಭ ವೇದಿಕೆಯಲ್ಲಿ ಮೋದಿಯವರಿಗೆ ಶಾಲು ಹೊದಿಸಿ ಈಶ್ವರಪ್ಪ ಅವರು ಸನ್ಮಾನಿಸಿದರು. ಬಳಿಕ ಮೋದಿಯವರಿಗೆ ವಿಶೇಷ ಪೇಟ ತೊಡಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ. ಶಿವಮೊಗ್ಗ ಏರ್​ಪೋರ್ಟ್​ ಕಲಾಕೃತಿಯನ್ನು ಕಾಣಿಕೆ ನೀಡಿದರು. ಬಳಿಕ ಯಡಿಯೂರಪ್ಪ ಅವರಿಗೆ ಪ್ರಧಾನಿ ಮೋದಿ ಸನ್ಮಾನ ಮಾಡಿದರು. ಹಸಿರು ಶಾಲು ಹೊದಿಸಿ, ಅಡಕೆ ಹಾರ ಹಾಕಿ, ಪೇಟ ತೊಡಿಸಿ, ನೇಗಿಲು ನೀಡಿ ಸನ್ಮಾನಿಸಿದರು.

ಸ್ಮಾರ್ಟ್ ಸಿಟಿ ಕಾಮಗಾರಿಗಳ ಉದ್ಘಾಟನೆ
ವಿಮಾನ ನಿಲ್ದಾಣ ಉದ್ಘಾಟನೆ ಬಳಿಕ ಪ್ರಧಾನಿ ಮೋದಿಯವರು ಶಿವಮೊಗ್ಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸ್ಮಾರ್ಟ್​ಸಿಟಿ ಕಾಮಗಾರಿ, ಶಿಮುಲ್​ ಹಾಲು ಪ್ಯಾಕಿಂಗ್​ ಘಟಕ, ಮಾಮ್​​ ಕೋಸ್ ಆಡಳಿತ ಭವನ, ಶಿಮೊಗ್ಗ-ಶಿಕಾರಿಪುರ, ರಾಣೆಬೆನ್ನೂರು ಹೊಸ ರೈಲು ಮಾರ್ಗಕ್ಕೆ ಶಿಲಾನ್ಯಾಸ ಹಾಗೂ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋಗೆ ಶಿಲಾನ್ಯಾಸ ಮಾಡಿದರು.

ಏರ್‌ಪೋರ್ಟ್ ಕುರಿತ ಕಿರುಚಿತ್ರ ಪ್ರದರ್ಶನ
ಕರ್ನಾಟಕದಲ್ಲಿ ಹೆಚ್ಚಾಗುತ್ತಿರುವ ವಿಮಾನಯಾನ ಪ್ರಯಾಣಿಕರು, ಕೇಂದ್ರ ಸರ್ಕಾರ ವಿಮಾನಯಾನಕ್ಕೆ ನೀಡಿದ ಉತ್ತೇಜನ, ಹೊಸ ವಿಮಾನ ನಿಲ್ದಾಣ ಸ್ಥಾಪನೆ, ಪ್ರವಾಸೋದ್ಯಮ ಕುರಿತು ವೇದಿಕೆಯಲ್ಲಿ ಕಿರುಚಿತ್ರ ಪ್ರದರ್ಶನ ಮಾಡಲಾಯಿತು.
ಕಿರುಚಿತ್ರದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದ ಸೌಲಭ್ಯಗಳು, ಅದರ ವಿಶೇಷತೆಗಳು, ಆರಂಭದಿಂದ ಹಿಡಿದು ಉದ್ಘಾಟನೆಯವರೆಗಿನ ಮಾಹಿತಿಯನ್ನು ನೀಡಲಾಯಿತು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ
May 10, 2025
7:42 PM
by: The Rural Mirror ಸುದ್ದಿಜಾಲ
ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ
May 10, 2025
7:05 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ
May 10, 2025
12:20 PM
by: ಸಾಯಿಶೇಖರ್ ಕರಿಕಳ
ಜೂನ್‌ನಿಂದ ಈ 6 ರಾಶಿಯವರ ಅದೃಷ್ಟ ಖುಲಾಯಿಸಲಿದೆ… ಕೋಟ್ಯಾಧಿಪತಿಗಳಾಗುವ ಯೋಗ!
May 10, 2025
8:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group