G7 ಶೃಂಗಸಭೆಯಲ್ಲಿ ಭಾರತಕ್ಕೆ ವಿಶೇಷ ಸ್ಥಾನ | ವಿಶ್ವವನ್ನು ಉದ್ದೇಶಿಸಿ ಸಭೆಯಲ್ಲಿ ಮೋದಿ ಹೇಳಿದ್ದೇನು? |

June 15, 2024
12:26 PM

G7 ಶೃಂಗಸಭೆಯಲ್ಲಿ (G7- Summit) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಇಟಲಿಗೆ ತಲುಪಿದ್ದಾರೆ. ಇಟಲಿಯ ಬರಿ (Bari) ನಗರದಲ್ಲಿ ನಡೆದ ಜಿ7 (G7) ರಾಷ್ಟ್ರಗಳ ಸಭೆಯಲ್ಲಿ ಮೋದಿ ಮಾತನಾಡಿ ತಂತ್ರಜ್ಞಾನವು(Technology) ಸೃಜನಶೀಲವಾಗಿರಬೇಕು, ವಿನಾಶಕಾರಿಯಾಗಬಾರದು ಎಂದು  ಕರೆ ನೀಡಿದ್ದಾರೆ. 21ನೇ ಶತಮಾನವನ್ನು ತಂತ್ರಜ್ಞಾನದ ಯುಗ ಎಂದು ಬಣ್ಣಿಸಿದ ಮೋದಿ, ತಂತ್ರಜ್ಞಾನವು ಮನುಷ್ಯನನ್ನು ಚಂದ್ರನತ್ತ(Moon) ಕರೆದೊಯ್ಯುವ ಧೈರ್ಯವನ್ನು ನೀಡುತ್ತದೆ. ಆದರೆ ಸೈಬರ್ ಭದ್ರತೆಯಂತಹ(Cyber Safety) ಸವಾಲುಗಳನ್ನು ಸಹ ಸೃಷ್ಟಿಸುತ್ತದೆ ಎಂದು ಹೇಳಿದರು.

Advertisement

ತಂತ್ರಜ್ಞಾನದ ಪ್ರಯೋಜನಗಳು ಸಮಾಜದ ಎಲ್ಲಾ ವರ್ಗಗಳನ್ನು ತಲುಪುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು. ಸಾಮಾಜಿಕ ಅಸಮಾನತೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ ಮತ್ತು ಅವುಗಳನ್ನು ಸೀಮಿತಗೊಳಿಸುವ ಬದಲು ಮಾನವ ಶಕ್ತಿಯನ್ನು ವಿಸ್ತರಿಸಲು ಸಹಾಯ ಮಾಡುತ್ತದೆ ಎಂದರು. ನಾವು ತಂತ್ರಜ್ಞಾನವನ್ನು ವಿನಾಶಕಾರಿಯಾಗಿ ಬಳಸದೇ ಸೃಜನಾತ್ಮಕಗೊಳಿಸಬೇಕು. ಆಗ ಮಾತ್ರ ನಾವು ಎಲ್ಲರನ್ನೂ ಒಳಗೊಳ್ಳುವ ಸಮಾಜವನ್ನು ನಿರ್ಮಿಸಬಹುದು ಎಂದು ಹೇಳಿದರು.

ಜಾಗತಿಕ ವೇದಿಕೆಯಲ್ಲಿ ಗ್ಲೋಬಲ್‌ ಸೌತ್‌ ದೇಶಗಳ ಕಳವಳಗಳನ್ನು ವ್ಯಕ್ತಪಡಿಸುವುದು ತನ್ನ ಜವಾಬ್ದಾರಿ ಎಂದು ಭಾರತ ಪರಿಗಣಿಸಿದೆ. ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ20 ಸಮ್ಮೇಳನದಲ್ಲಿ ಆಫ್ರಿಕಾ ಒಕ್ಕೂಟವನ್ನು ಜಿ20 ಖಾಯಂ ಸದಸ್ಯರನ್ನಾಗಿ ಸ್ವೀಕರಿಸಲಾಗಿದೆ. ಇದು ಭಾರತದ ಗಮನಾರ್ಹ ಸಾಧನೆ ಮತ್ತು ಗೌರವವನ್ನು ಸೂಚಿಸುತ್ತದೆ ಎಂದು ಮೋದಿ ತಿಳಿಸಿದರು. ಜಿ7 ಸಭೆ ಮುಗಿದ ಬಳಿಕ ಕೊನೆಯಲ್ಲಿ ಎಲ್ಲಾ ದೇಶದ ನಾಯಕರ ಗ್ರೂಪ್‌ ಫೋಟೋ ತೆಗೆಯಲಾಗಿತ್ತು. ಈ ಫೋಟೋದಲ್ಲಿ ಪ್ರಧಾನಿ ಮೋದಿ ಮಧ್ಯದಲ್ಲಿ ನಿಂತಿದ್ದು ವಿಶೇಷವಾಗಿತ್ತು.

ಭಾರತದ ಚುನಾವಣಾ ಫಲಿತಾಂಶ ಪ್ರಕಟವಾಗುವ ಮೊದಲೇ ಪ್ರಧಾನಿ ಮೋದಿ ಅವರಿಗೆ ಏಪ್ರಿಲ್‌ ತಿಂಗಳಿನಲ್ಲಿ ಜಿ7 ಸಭೆಗೆ ಆಗಮಿಸುವಂತೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಆಹ್ವಾನ ನೀಡಿದ್ದರು. ಭಾರತ ಜಿ7 ದೇಶಗಳ ಒಕ್ಕೂಟದಲ್ಲಿ ಇಲ್ಲ. ಆದರೆ ವಿಶೇಷ ಅತಿಥಿಯಾಗಿ ಈ ಸಭೆಯಲ್ಲಿ ಭಾಗವಹಿಸಲು ಇಟಲಿ ಆಹ್ವಾನ ನೀಡಿತ್ತು.

  • ಅಂತರ್ಜಾಲ ಮಾಹಿತಿ

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಒಂದು ವರ್ಷದಲ್ಲಿ 5600 ಕಿ.ಮೀ. ಹೆದ್ದಾರಿ ನಿರ್ಮಾಣ |
April 3, 2025
7:42 AM
by: The Rural Mirror ಸುದ್ದಿಜಾಲ
81 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯ
April 3, 2025
7:32 AM
by: The Rural Mirror ಸುದ್ದಿಜಾಲ
ಮೇಷ ರಾಶಿಯವರಿಗೆ ಬಹಳ ಶುಭ ದಿನ
April 3, 2025
7:05 AM
by: ದ ರೂರಲ್ ಮಿರರ್.ಕಾಂ
ಹೆಚ್ಚುತ್ತಿರುವ ತಾಪಮಾನ | 2030 ರ ವೇಳೆಗೆ ಭಾರತದಲ್ಲಿ ಶೇ.5 ರಷ್ಟು ಉತ್ಪಾದನೆ ಕುಸಿತ
April 2, 2025
11:46 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group