ಹೊಸ ಸಂಸತ್ ಭವನದಲ್ಲಿ ನಡೆಯಲಿದೆ ವಿಶೇಷ ಅಧಿವೇಶನ | ಗಣೇಶ ಚತುರ್ಥಿಯಂದು ನೂತನ ಕಟ್ಟಡ ಪ್ರವೇಶದ ಮುಹೂರ್ತ |

September 6, 2023
3:51 PM
ಸೆಪ್ಟೆಂಬರ್ 18 ರಿಂದ ಪ್ರಾರಂಭವಾಗಲಿರುವ 5 ದಿನಗಳ ಸಂಸತ್ತಿನ ವಿಶೇಷ ಅಧಿವೇಶನವು ಹಳೆಯ ಕಟ್ಟಡದಲ್ಲಿ ಪ್ರಾರಂಭವಾಗಲಿದ್ದು, ಗಣೇಶ ಚತುರ್ಥಿಯ ಅಂದರೆ ಸೆಪ್ಟೆಂಬರ್ 19 ರಂದು ಎರಡನೇ ದಿನದ ಅಧಿವೇಶವನ್ನು ನೂತನ ಸಂಸತ್ತಿನ ಕಟ್ಟಡದಲ್ಲಿ ನಡೆಯಲಿದೆ.

ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಸಂದರೂ ಅದೆಷ್ಟೋ ಸರ್ಕಾರಿ ಕಚೇರಿಗಳು ಖಾಸಗಿ ಬಾಡಿಗೆ ಕಟ್ಟಡದಲ್ಲೇ ನಡೆಯುತ್ತಿತ್ತು. ಈ ವರ್ಷದ ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಹೊಸ ಸಂಸತ್ ಭವನ ಉದ್ಘಾಟನೆಗೊಳಿಸಿದ್ದರು. ಸಂಸತ್ತಿನ ವಿಶೇಷ ಅಧಿವೇಶನವು ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯಲಿದೆ. ಸೆಪ್ಟೆಂಬರ್ 19 ರಂದು ಗಣೇಶ ಚತುರ್ಥಿಯ ಸಂದರ್ಭದಲ್ಲಿ, ಸಂಸತ್ತಿನ ಕಾರ್ಯಚಟುವಟಿಕೆಗಳು ಹೊಸ ಸಂಸತ್ತಿನ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ.

Advertisement
Advertisement
Advertisement
Advertisement

ಸೆಪ್ಟೆಂಬರ್ 18ರಿಂದ ಪ್ರಾರಂಭವಾಗಲಿರುವ 5 ದಿನಗಳ ಸಂಸತ್ತಿನ ವಿಶೇಷ ಅಧಿವೇಶನವು ಹಳೆಯ ಕಟ್ಟಡದಲ್ಲಿ ಪ್ರಾರಂಭವಾಗಲಿದ್ದು, ಗಣೇಶ ಚತುರ್ಥಿಯ ಅಂದರೆ ಸೆಪ್ಟೆಂಬರ್ 19ರಂದು ಎರಡನೇ ದಿನದ ಅಧಿವೇಶವನ್ನು 2023 ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿರುವ ಹೊಸ ಸಂಸತ್ತಿನ ಕಟ್ಟಡದಲ್ಲಿ ನಡೆಯಲಿದೆ. ಈ ಬಗ್ಗೆ ಕೇಂದ್ರದ ಮೂಲಗಳು ತಿಳಿಸಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

Advertisement

ಸಂಸತ್ತಿನ ಎಲ್ಲ ಕಾರ್ಯಚಟುವಟಿಕೆಗಳು ಸೆಪ್ಟೆಂಬರ್ 19ರಂದು, ಹೊಸದಾಗಿ ಉದ್ಘಾಟನೆಗೊಂಡಿರುವ ಸಂಸತ್ತಿನ ಕಟ್ಟಡಕ್ಕೆ ಬದಲಾಗಲಿವೆ ಎಂದು ವರದಿ ಹೇಳಿದೆ. ಸಂಸತ್ತಿನ ಉಭಯ ಸದನಗಳ ಅಧಿವೇಶನವು ಪ್ರಶ್ನೋತ್ತರ ಸಮಯ ಅಥವಾ ಖಾಸಗಿ ಸದಸ್ಯರ ವ್ಯವಹಾರವಿಲ್ಲದೆ ನಡೆಯಲಿದೆ ಎಂದು ಲೋಕಸಭೆ ಮತ್ತು ರಾಜ್ಯಸಭಾ ಕಾರ್ಯದರ್ಶಿ ಶನಿವಾರ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಅಧಿವೇಶನವು ಐದು ದಿನಗಳ ಕಾಲ ನಡೆಯಲಿದ್ದು, ಅಧಿವೇಶದ ಕಾರ್ಯಚಟುವಿಟಕೆಗಳ ಬಗ್ಗೆ ಸದಸ್ಯರಿಗೆ ತಾತ್ಕಾಲಿಕ ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ ಎಂದು ಲೋಕಸಭೆ ಕಾರ್ಯದರ್ಶಿಗಳು ತಿಳಿಸಿದ್ದಾರೆ. ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ “ವಿಶೇಷ ಅಧಿವೇಶನ” ವನ್ನು ನಡೆಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದ್ದರು. ಇನ್ನು ಸಂಸತ್ತಿನ ಯಾವೆಲ್ಲ ವಿಚಾರಗಳು ಚರ್ಚೆಯಾಗಲಿದೆ. ಜತೆಗೆ ಸದನದ ಕಾರ್ಯಸೂಚಿಯ ಬಗ್ಗೆ ತಿಳಿಸಿಲ್ಲ ಎಂಬ ಮಾತುಗಳು ವಿರೋಧ ಪಕ್ಷಗಳಿಂದ ಕೇಳಿ ಬರುತ್ತಿದೆ.

Advertisement

ಸರ್ಕಾರ ಒಂದು ವರ್ಷದಲ್ಲಿ ಮೂರು ಅಧಿವೇಶಗಳನ್ನು (ಬಜೆಟ್, ಮಾನ್ಸೂನ್ ಮತ್ತು ಚಳಿಗಾಲ ಅಧಿವೇಶ) ನಡೆಸುತ್ತದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು. ಆದರೆ ಈ ವಿಶೇಷ ಅಧಿವೇಶನದ ಕಾರ್ಯಸೂಚಿ ಅಥವಾ ಅಧಿವೇಶದ ಬಗ್ಗೆ ಪ್ರಲ್ಹಾದ್ ಜೋಶಿ ಅವರು ಯಾವುದೇ ಹೆಚ್ಚಿನ ಮಾಹಿತಿ ನೀಡಿಲ್ಲ ಎಂದು ಹೇಳಲಾಗಿದೆ. ಇನ್ನು ಈ ಅಧಿವೇಶವನ್ನು ಸರ್ಕಾರ ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಜತೆಗೆ ಈಗಾಗಲೇ ಒಂದು ದೇಶ, ಒಂದು ಚುನಾವಣೆ ಪರಿಶೀಲನೆಗೆ ಮಾಜಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ನೇತೃತ್ವದ ಸಮಿತಿಯನ್ನು ಕೂಡ ರಚನೆ ಮಾಡಲಾಗಿದೆ.

Source : News Agencies

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror