ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಸಂದರೂ ಅದೆಷ್ಟೋ ಸರ್ಕಾರಿ ಕಚೇರಿಗಳು ಖಾಸಗಿ ಬಾಡಿಗೆ ಕಟ್ಟಡದಲ್ಲೇ ನಡೆಯುತ್ತಿತ್ತು. ಈ ವರ್ಷದ ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಹೊಸ ಸಂಸತ್ ಭವನ ಉದ್ಘಾಟನೆಗೊಳಿಸಿದ್ದರು. ಸಂಸತ್ತಿನ ವಿಶೇಷ ಅಧಿವೇಶನವು ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯಲಿದೆ. ಸೆಪ್ಟೆಂಬರ್ 19 ರಂದು ಗಣೇಶ ಚತುರ್ಥಿಯ ಸಂದರ್ಭದಲ್ಲಿ, ಸಂಸತ್ತಿನ ಕಾರ್ಯಚಟುವಟಿಕೆಗಳು ಹೊಸ ಸಂಸತ್ತಿನ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ.
ಸೆಪ್ಟೆಂಬರ್ 18ರಿಂದ ಪ್ರಾರಂಭವಾಗಲಿರುವ 5 ದಿನಗಳ ಸಂಸತ್ತಿನ ವಿಶೇಷ ಅಧಿವೇಶನವು ಹಳೆಯ ಕಟ್ಟಡದಲ್ಲಿ ಪ್ರಾರಂಭವಾಗಲಿದ್ದು, ಗಣೇಶ ಚತುರ್ಥಿಯ ಅಂದರೆ ಸೆಪ್ಟೆಂಬರ್ 19ರಂದು ಎರಡನೇ ದಿನದ ಅಧಿವೇಶವನ್ನು 2023 ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿರುವ ಹೊಸ ಸಂಸತ್ತಿನ ಕಟ್ಟಡದಲ್ಲಿ ನಡೆಯಲಿದೆ. ಈ ಬಗ್ಗೆ ಕೇಂದ್ರದ ಮೂಲಗಳು ತಿಳಿಸಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
ಸಂಸತ್ತಿನ ಎಲ್ಲ ಕಾರ್ಯಚಟುವಟಿಕೆಗಳು ಸೆಪ್ಟೆಂಬರ್ 19ರಂದು, ಹೊಸದಾಗಿ ಉದ್ಘಾಟನೆಗೊಂಡಿರುವ ಸಂಸತ್ತಿನ ಕಟ್ಟಡಕ್ಕೆ ಬದಲಾಗಲಿವೆ ಎಂದು ವರದಿ ಹೇಳಿದೆ. ಸಂಸತ್ತಿನ ಉಭಯ ಸದನಗಳ ಅಧಿವೇಶನವು ಪ್ರಶ್ನೋತ್ತರ ಸಮಯ ಅಥವಾ ಖಾಸಗಿ ಸದಸ್ಯರ ವ್ಯವಹಾರವಿಲ್ಲದೆ ನಡೆಯಲಿದೆ ಎಂದು ಲೋಕಸಭೆ ಮತ್ತು ರಾಜ್ಯಸಭಾ ಕಾರ್ಯದರ್ಶಿ ಶನಿವಾರ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಅಧಿವೇಶನವು ಐದು ದಿನಗಳ ಕಾಲ ನಡೆಯಲಿದ್ದು, ಅಧಿವೇಶದ ಕಾರ್ಯಚಟುವಿಟಕೆಗಳ ಬಗ್ಗೆ ಸದಸ್ಯರಿಗೆ ತಾತ್ಕಾಲಿಕ ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ ಎಂದು ಲೋಕಸಭೆ ಕಾರ್ಯದರ್ಶಿಗಳು ತಿಳಿಸಿದ್ದಾರೆ. ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ “ವಿಶೇಷ ಅಧಿವೇಶನ” ವನ್ನು ನಡೆಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದ್ದರು. ಇನ್ನು ಸಂಸತ್ತಿನ ಯಾವೆಲ್ಲ ವಿಚಾರಗಳು ಚರ್ಚೆಯಾಗಲಿದೆ. ಜತೆಗೆ ಸದನದ ಕಾರ್ಯಸೂಚಿಯ ಬಗ್ಗೆ ತಿಳಿಸಿಲ್ಲ ಎಂಬ ಮಾತುಗಳು ವಿರೋಧ ಪಕ್ಷಗಳಿಂದ ಕೇಳಿ ಬರುತ್ತಿದೆ.
ಸರ್ಕಾರ ಒಂದು ವರ್ಷದಲ್ಲಿ ಮೂರು ಅಧಿವೇಶಗಳನ್ನು (ಬಜೆಟ್, ಮಾನ್ಸೂನ್ ಮತ್ತು ಚಳಿಗಾಲ ಅಧಿವೇಶ) ನಡೆಸುತ್ತದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು. ಆದರೆ ಈ ವಿಶೇಷ ಅಧಿವೇಶನದ ಕಾರ್ಯಸೂಚಿ ಅಥವಾ ಅಧಿವೇಶದ ಬಗ್ಗೆ ಪ್ರಲ್ಹಾದ್ ಜೋಶಿ ಅವರು ಯಾವುದೇ ಹೆಚ್ಚಿನ ಮಾಹಿತಿ ನೀಡಿಲ್ಲ ಎಂದು ಹೇಳಲಾಗಿದೆ. ಇನ್ನು ಈ ಅಧಿವೇಶವನ್ನು ಸರ್ಕಾರ ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಜತೆಗೆ ಈಗಾಗಲೇ ಒಂದು ದೇಶ, ಒಂದು ಚುನಾವಣೆ ಪರಿಶೀಲನೆಗೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ಕೂಡ ರಚನೆ ಮಾಡಲಾಗಿದೆ.
Source : News Agencies
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…