#RuralProblem | ವಾಹನ ಸಾಗಲು ರಸ್ತೆಯೇ ಇಲ್ಲದ ಊರು…! | ರೋಗಿಗಳಿಗೆ ಕಂಬಳಿಯೇ ಅ್ಯಂಬುಲೆನ್ಸ್ | ಗ್ರಾಮಸ್ಥರೇ ಆಸರೆ… |

July 4, 2023
12:37 PM
ಮಳೆಗಾಲ ಆರಂಭವಾದ ಕೂಡಲೇ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆಗಳು ತಾಂಡವವಾಡುತ್ತವೆ. ಮೂಲಭೂತ ವ್ಯವಸ್ಥೆ ಇನ್ನೂ ಗ್ರಾಮೀಣ ಭಾಗದವರೆಗೂ ತಲುಪಿಲ್ಲ ಎನ್ನುವುದನ್ನು ಮತ್ತೆ ಮತ್ತೆ ನೆನಪಿಸುತ್ತಲೇ ಇರುತ್ತವೆ ಹಲವು ಘಟನೆಗಳು.

ದೇಶದ ಅದೆಷ್ಟೋ ಹಳ್ಳಿಗಳ ಜನ ಇಂದು ಕೂಡ ಕತ್ತಲಲ್ಲೇ ದಿನ ಸವೆಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅನೇಕ ಗ್ರಾಮಗಳು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ. ರಸ್ತೆ, ನೀರು, ವಿದ್ಯುತ್​ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳು ಇಲ್ಲ. ಇದಕ್ಕೆ ಪೂರಕವೆಂಬಂತೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಸಣಕಾ ಗ್ರಾಮದ ರಸ್ತೆ ಸಮಸ್ಯೆಯಿಂದಾಗಿ ಆಂಬ್ಯುಲೆನ್ಸ್ ಬರಲಾಗದೇ ರೋಗಿಯನ್ನ ಗ್ರಾಮಸ್ಥರು ಕಂಬಳಿಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದಿದಿದ್ದಾರೆ.

Advertisement
Advertisement
Advertisement

ಈ ಗ್ರಾಮಕ್ಕೆ ರಸ್ತೆ ಸಂಪರ್ಕ ಸರಿಯಾಗಿ ಇಲ್ಲದಿದ್ದರಿಂದ ರೋಗಿಯನ್ನ ಹೊತ್ತು ಆಸ್ಪತ್ರೆಗೆ ಸಾಗಿಸುವ ಅನಿವಾರ್ಯತೆ. ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಸಣಕಾ ಗ್ರಾಮಕ್ಕೆ ವಾಹನ ಸಂಚಾರಕ್ಕೆ ರಸ್ತೆ ಇಲ್ಲದ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದ ದ್ರೌಪದಿ ಪಾವು ದೇಸಾಯಿ(80) ವೃದ್ಧೆಯನ್ನು ಗ್ರಾಮಸ್ಥರು ಕಂಬಳಿ ಜೋಲಿಯಲ್ಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಂಬುಲೆನ್ಸ್ ಬರಲು ಸಾಧ್ಯವಾಗದ ಕಾರಣ ಸುಮಾರು 2.5 ಕಿಮೀ ದೂರ ಜೋಲಿಯಲ್ಲೇ ಹೊತ್ತೊಯ್ದು ಬಳಿಕ ವಾಹನದ ಮೂಲಕ ದಾಂಡೇಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Advertisement

ಭಾರತ ದೇಶದ ಕಟ್ಟಕಡೆಯ ಹಳ್ಳಿಗಳಿಗೂ ಮೂಲ ಸೌಕರ್ಯ ಕಲ್ಪಿಸುವುದೇ ಮೊದಲ ಆದ್ಯತೆ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರತಿ ದಿನ ಬೊಬ್ಬಿಡುತ್ತಿವೆ. ಆದರೆ ರಾಜ್ಯದಲ್ಲಿ ಈ ರೀತಿಯ ಅದೆಷ್ಟೋ ಗ್ರಾಮಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಚುನಾವಣೆ ಬಂದಾಗ ಜನರನ್ನು ದೇವರು ಎಂದು ಹೇಳುವ ಅದೆಷ್ಟೋ ಜನಪ್ರತಿನಿಧಿಗಳು ಎಲೆಕ್ಷನ್ ಮುಗಿದ ಮೇಲೆ ಗ್ರಾಮಗಳತ್ತ ಕಣ್ಣೆತ್ತಿ ನೋಡಲ್ಲ. ಆಮೇಲೆ ಅವರವರ ಪಾಡು ಅವರವರಿಗೆ ಅಷ್ಟೆ.

Advertisement
(ಕೃಪೆ: ಅಂತರ್ಜಾಲ )

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24.11.2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ದೂರವಾದ ಮಳೆಯ ಸಾಧ್ಯತೆ
November 24, 2024
12:05 PM
by: ಸಾಯಿಶೇಖರ್ ಕರಿಕಳ
ಅಡಿಕೆಯ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಹೇಗೆ ? | ವಿಜ್ಞಾನಿ ಡಾ.ಭವಿಷ್ಯ ಅವರಿಂದ ಮಾಹಿತಿ |
November 24, 2024
7:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕಿರೋಗ ನಿರ್ವಹಣಾ ವಿಧಾನಗಳು ಹೇಗೆ..?
November 24, 2024
7:09 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |
November 23, 2024
12:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror